ಸಿಂಧನೂರು | ಎದೆನೋವಿನಿಂದ ಕುಸಿದು ಬಿದ್ದ ವ್ಯಕ್ತಿಯನ್ನು ಆಂಬುಲೆನ್ಸ್ ನಲ್ಲಿ ಸಾಗಿಸುವಾಗ ಮೃತ್ಯು
Update: 2025-07-07 21:05 IST
ಸಾಂದರ್ಭಿಕ ಚಿತ್ರ
ರಾಯಚೂರು : ಎದೆನೋವು ಕಾಣಿಸಿಕೊಂಡ ವ್ಯಕ್ತಿಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಮೃತಮಟ್ಟ ವ್ಯಕ್ತಿಯನ್ನು ಸಿಂಧನೂರು ತಾಲ್ಲೂಕಿನ ಪಗಡದಿನ್ನಿ ಕ್ಯಾಂಪ್‍ನ ನಿವಾಸಿ ನಿವಾಸಿ ಶರಣಬಸವ(30) ಎಂದು ಗುರುತಿಸಲಾಗಿದೆ.
ಶರಣಬಸವ ಅವರು ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮಕ್ಕೆ ಕುಟುಂಬದೊಂದಿಗೆ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ತೆರಳಿದ್ದರು. ಭಾನುವಾರ ರಾತ್ರಿ ಮನೆ ಮೇಲೆ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ನಂತರ ಚಿಕಿತ್ಸೆಗಾಗಿ ಮಸ್ಕಿ ತಾಲ್ಲೂಕು ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದರು. ನಂತರ ಸಿಂಧನೂರು ನಗರದ ಆಸ್ಪತ್ರೆಯ ಆಂಬ್ಯಲೆನ್ಸ್‍ನಲ್ಲಿ ತೆರಳುತ್ತಿದ್ದಾಗ ನಿಧನರಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.