ಸಿಂಧನೂರು| ಉರ್ದು ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಸಿಂಧನೂರು: ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆಯಬೇಕಾದರೆ ಪ್ರತಿಭಾ ಕಾರಂಜಿಗಳಲ್ಲಿ ಭಾಗವಹಿಸಬೇಕು. ಅವರ ಚಲನವಲನಗಳನ್ನು ಗಮನಿಸಿ ಅವರಲ್ಲಿ ಯಾವ ಕಲೆ ಅಡಗಿದೆ ಎಂದು ಗುರುತಿಸಿ ಅವರ ಮುಂದಿನ ವಿದ್ಯಾಭ್ಯಾಸ ಮತ್ತು ಕಲೆಗೆ ಪ್ರೋತ್ಸಾಹ ನೀಡಬೇಕು ಎಂದು ಬಿಜೆಪಿ ಮುಖಂಡ ಕೆ.ಕರಿಯಪ್ಪ ಹೇಳಿದರು.
ನಗರದ ಮಿಲಾಪ್ ಶಾದಿಮಹಲ್ ನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮತ್ತು ಉರ್ದು ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಾತನಾಡಿದ ಕೆ.ಕರಿಯಪ್ಪ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಶಾಲೆಯಲ್ಲಿ ಅಕ್ಷರ ಜ್ಞಾನ ಕೊಟ್ಟರೆ ವಿದ್ಯಾರ್ಥಿ ಉತ್ತಮ ಪ್ರಜೆಯಾಗಿ ಸಮಾಜಕ್ಕೆ ಉತ್ತಮ ಸಂದೇಶ ಕೊಡುತ್ತಾರೆ. ಉರ್ದು ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ನಗರಸಭೆ ಸದಸ್ಯ ಕೆ.ಜಿಲಾನಿ ಪಾಷಾ ಮಾತನಾಡಿ, ವಿದ್ಯಾರ್ಥಿಗಳ ಜೀವನ ಬಿಳಿ ಹಾಳೆ ಇದ್ದಂತೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಪೂರಕವಾದ ವಾತವರಣ ನಿರ್ಮಿಸಿ ಅವರ ಭವಿಷ್ಯ ಉತ್ತಮಗೊಳಿಸಲು ಪ್ರಯತ್ನಿಸಬೇಕೆಂದರು.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ, ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಸಾಬಣ್ಣ ವಗ್ಗಾರ್, ಮುಸ್ಲಿಂ ಸಮಾಜದ ಹಿರಿಯ ಮುಖಂಡ ಸೈಯದ್ ಖಾದರ್ ಸುಭಾನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿಮಲಿಕ್ ವಕೀಲ, ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಖಾಜಾಸಾಬ್, ಮುಖ್ಯಗುರು ಹುಸೇನ್ ಭಾಷಾ, ನಗರಸಭೆ ಮಾಜಿ ಸದಸ್ಯ ಇಕ್ಬಾಲ್ ಸಾಬ್, ಶಿಕ್ಷಕರಾದ ನಹೀಮ್ ಪಾಷಾ, ಮೋಹಿನ್ ದೀನ್, ಹನುಮಂತಪ್ಪ, ಮಾನಮ್ಮ ನಾಯಕ, ಅಂಬಮ್ಮ, ಅಲಿಮುದ್ದೀನ್, ನಫೀಸಾ ಸುಲ್ತಾನ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಶಿಕ್ಷಕರ ಸಂಘದ ಪದಾಧಿಕಾರಿಗಳು, ವಿವಿಧ ಉರ್ದು ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.