×
Ad

ಸಿಂಧನೂರು : ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವ ವಕೀಲ ಮೃತ್ಯು

Update: 2026-07-16 12:32 IST

ರಾಯಚೂರು:  ಕೃಷಿ ಹೊಂಡಕ್ಕೆ ಕಾಲುಜಾರಿ ಬಿದ್ದು ಯುವ ವಕೀಲರೊಬ್ಬರು ಮೃತಪಟ್ಟ ಘಟನೆ ಬುಧವಾರ ಸಿಂಧನೂರು ತಾಲ್ಲೂಕಿನ ಉಮಲೂಟಿ ಗ್ರಾಮದಲ್ಲಿ ನಡೆದಿದೆ.

ಅನೀಪ ಬೀರಮಲ್ಲಪ್ಪ ನಾಯ್ಕರ (30) ಮೃತಪಟ್ಟ ವಕೀಲ. ಎರಡು ತಿಂಗಳ ಹಿಂದೆ ವಿವಾಹವಾಗಿದ್ದರು.

ಕೃಷಿ ಹೊಂಡವೊಂದರಲ್ಲಿ ಕುರಿಗಳ ಮೈ ತೊಳೆಯಲು ಹೋದ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾರೆಂದು ಹೇಳಲಾಗಿದ್ದು, ಹೊಂಡದ ಹೂಳಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.  ಮಾಹಿತಿ ತಿಳಿದ ಗ್ರಾಮಸ್ಥರು ಅನೀಪ ಅವರ  ಮೃತದೇಹವನ್ನು ಹೊಂಡದಿಂದ ಹೊರತೆಗೆದಿದ್ದಾರೆ.

ಘಟನಾ ಸ್ಥಳಕ್ಕೆ ತುರ್ವಿಹಾಳ ಪೊಲೀಸ್ ಠಾಣೆಯ ಪಿಎಸ್‌ಐ ಸುಜಾತಾ ಅವರು ಭೇಟಿ ನೀಡಿದ್ದಾರೆ. ಮೃತ ದೇಹವನ್ನು ಸಿಂಧನೂರಿನ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಈ ಬಗ್ಗೆ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News