×
Ad

ಸಿಂಧನೂರು | ಸಾರ್ವಜನಿಕ ಕುರ್‌ಆನ್ ಪ್ರವಚನ ಕಾರ್ಯಕ್ರಮಕ್ಕೆ‌ ಮುಹಮ್ಮದ್ ಕುಂಞ ಚಾಲನೆ

Update: 2025-05-03 20:41 IST

ಸಿಂಧನೂರು : ಅವರ ಸಂದೇಶಗಳು ಮನುಕುಲಕ್ಕೆ ದಾರಿದೀಪವಾಗಿದೆ. ಸಮಾಜದಲ್ಲಿ ಅನಿಷ್ಠವನ್ನು ಹೊಗಲಾಡಿಸಿ ಮಾನವೀಯ ಮೌಲ್ಯಗಳನ್ನು ಬಿತ್ತಿರಿಸಿದ್ದಾರೆ ಎಂದು ಶಾಂತಿ ಪ್ರಕಾಶನದ ವ್ಯವಸ್ಥಾಪಕ ಹಾಗೂ ಚಿಂತಕ ಮುಹಮ್ಮದ್ ಕುಂಞ ಹೇಳಿದರು.

ನಗರದ ಆರ್‌.ಜಿ.ಎಂ. ಶಾಲಾ ಮೈದಾನದಲ್ಲಿ ಶುಕ್ರವಾರ ಸಂಜೆ ಜಮಾಅತೆ ಇಸ್ಲಾಮಿ ಹಿಂದ್ ತಾಲ್ಲೂಕು ಘಟಕದಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಸಾರ್ವಜನಿಕ ಕುರ್‌ಆನ್ ಪ್ರವಚನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಗತ್ತಿಗೆ ಸಮಸ್ಯೆಯಾಗಿ ಕಾಡುತ್ತಿರುವ ವಾಯು ಮಾಲಿನ್ಯ, ಜಲ ಮಾಲಿನ್ಯದಂತೆ ಮನುಷ್ಯರ ಮನಸ್ಸುಗಳು ಮಾಲಿನ್ಯವಾಗಿದ್ದು, ಅವುಗಳನ್ನು ಹೊಗಲಾಡಿಸಲು ಧಾರ್ಮಿಕ ಸಂಸ್ಥೆಗಳು ಜಾಗೃತಿ ಮೂಡಿಸುವ ಕೆಲಸಮಾಡಗಬೇಕು ಎಂದರು.

ವಳಬಳ್ಳಾರಿ ಸುವರ್ಣಗಿರಿ ವಿರಕ್ತ ಮಠದ ಸಿದ್ದಲಿಂಗ ಮಹಾಸ್ವಾಮಿ ಸಾನಿಧ್ಯ ವಹಿಸಿದ್ದರು. ಸಾರ್ವಜನಿಕ ಕುರ್‌ಆನ್ ಪ್ರವಚನ ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಶರಣೇಗೌಡ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಹಂಪನಗೌಡ ಬಾದರ್ಲಿ, ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ನಿವೃತ್ತ ಪ್ರಾಶಂಪಾಲ ಶಾಶ್ವತಸ್ವಾಮಿ ಮುಕ್ಕುಂದಿಮಠ, ನಗರಸಭೆ ಉಪಾಧ್ಯಕ್ಷೆ ಮಂಜುಳಾ ಪ್ರಭುರಾಜ, ಪೌರಾಯುಕ್ತ ಮಂಜುನಾಥ ಗುಂಡೂರು, ಸದಸ್ಯರಾದ ಕೆ.ಜಿಲಾನಿಪಾಷ, ಸಣ್ಣ ವೀರಭದ್ರಪ್ಪ ಕುರುಕುಂದಿ, ವೀರೇಶ ಹಟ್ಟಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಟಿ.ಹುಸೇನ್‍ಸಾಬ, ವಾಲ್ಮೀಕಿ ಸಮಾಜದ ಅಧ್ಯಕ್ಷ ಆರ್.ತಿಮ್ಮಯ್ಯ ನಾಯಕ, ಕಾರ್ಮಿಕ ಮುಖಂಡ ವೆಂಕನಗೌಡ ಗದ್ರಟಗಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜ ಹಿರೇಗೌಡರ್, ಡಾ.ಪದ್ಮಾ ಪಾಟೀಲ್, ನಿವೃತ್ತ ಶಿಕ್ಷಕಿ ಸಿದ್ದೇಶ್ವರಿ, ಸಮುದಾಯ ಸಂಘಟನೆಯ ರಾಜ್ಯ ಕಾರ್ಯದಶಿ ಎಸ್.ದೇವೇಂದ್ರ ಗೌಡ, ಪತ್ರಕರ್ತರಾದ ಅಶೋಕ ಬೆನ್ನೂರು, ಅಮರೇಶ ಅಲಬನೂರು ಮತ್ತಿತರರು ಇದ್ದರು. ಹುಸೇನಪ್ಪ ಅಮರಾಪುರ ನಿರೂಪಿಸಿದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News