ಸಿಂಧನೂರು | ಕಸವಿಲೇವಾರಿ ಸಂಗ್ರಹ ಘಟಕಕ್ಕೆ ಎಂಎಲ್‍ಸಿ ಬಸನಗೌಡ ಬಾದರ್ಲಿ ಭೇಟಿ
ಸಿಂಧನೂರು : ನಗರದ ಹೊರವಲಯದಲ್ಲಿರುವ ನಗರಸಭೆಯ ಕಸವಿಲೇವಾರಿ ಸಂಗ್ರಹ ಘಟಕಕ್ಕೆ ಸೋಮವಾರ ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ಭೇಟಿ ನೀಡಿ, ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತಿರುವ ನಗರಸಭೆ ಅಧಿಕಾರಿ, ಸಿಬ್ಬಂದಿಗಳನ್ನು ತರಾಟೆ ತೆಗೆದುಕೊಂಡರು.
ನಗರದಲ್ಲಿ ಸಂಗ್ರಹಿಸಿದ ಕಸ ವೈಜ್ಞಾನಿಕವಾಗಿ ಸಂಸ್ಕರಣೆ ಮಾಡುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು. ಕಸಕ್ಕೆ ಬೆಂಕಿ ಹಚ್ಚಿ ಸುಡುವುದರಿಂದ ನಗರದ ನಾಗರಿಕರು ಹಾಗೂ ಕಸ ಸಂಗ್ರಹ ಘಟಕದ ಹತ್ತಿರ ಇರುವ ಹಳ್ಳಿಗಳ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗಿ ಸರ್ಕಾರಿ ನೀಡುವ ಸಂಬಳಕ್ಕೆ ನಿಯತ್ತಿನಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ನಂತರ ಮಲ್ಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಕಸವಿಲೇವಾರಿ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮಕೈಗೊಳ್ಳಲು ಬಸನಗೌಡ ಬಾದರ್ಲಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೀರೇಶ ರಾರಾವಿ, ಪ್ರಭುದೇವರಗುಡಿ, ಪರಶುರಾಮ್ ಮಲ್ಲಾಪುರ ಸೇರಿದಂತೆ ಹಲವರು ಇದ್ದರು.