Sindhnur | ನಿಂತಿದ್ದ ಲಾರಿಗೆ ಟಿಟಿ ವಾಹನ ಢಿಕ್ಕಿ: ಓರ್ವನ ಸ್ಥಿತಿ ಗಂಭೀರ, 13 ಜನರಿಗೆ ಗಾಯ
ಸಿಂಧನೂರು: ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಢಿಕ್ಕಿ ಹೊಡೆದಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, 13 ಜನರಿಗೆ ಗಾಯಗಳಾದ ಘಟನೆ ಶುಕ್ರವಾರ ಬೆಳಗ್ಗೆ ತಾಲ್ಲೂಕಿನ ಅರಗಿನಮರದ ಬಳಿ ನಡೆದಿದೆ.
ರಾಯಚೂರಿನ ಕುಂಬಾರಿ ಓಣಿಯ ನಿವಾಸಿಗಳು ಸಿಂಧನೂರು ಮಾರ್ಗವಾಗಿ ಹಾಸನಕ್ಕೆ ಪ್ರವಾಸ ಹೊರಟಾಗ, ಟಿಟಿ ವಾಹನದಲ್ಲಿ ತಾಂತ್ರಿಕ ದೋಷ ಕಂಡಿದ್ದು, ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಟಿಟಿ ವಾಹನದಲ್ಲಿ ನವೀನ್ ಕುಮಾರ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 13 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.