ರಾಯಚೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಚುನಾವಣಾ ಆಯೋಗ ಮಂಡಿಸಿರುವ ಕರಡು ಮತದಾರರ ಪಟ್ಟಿಯನ್ನು ಒಪ್ಪಲು ಸಾಧ್ಯವಿಲ್ಲ. ದೋಷಪೂರಿತ ಹಾಗೂ ಅವೈಜ್ಞಾನಿಕ ಪ್ರಕ್ರಿಯೆಯ ಮೂಲಕ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಎದ್ದೇಳು ಕರ್ನಾಟಕದ ಜಿಲ್ಲಾ ಸಂಚಾಲಕ ಶರಣಕುಮಾರ್‌ ಆರೋಪಿಸಿದರು.

ರಾಜ್ಯದಲ್ಲಿ ಸುಮಾರು 60 ಲಕ್ಷ ಅರ್ಹ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗಿದ್ದು, 44 ಲಕ್ಷ ಮತದಾರರಿಗೆ ನಾಗರಿಕತ್ವದ ಕುರಿತು ನೋಟಿಸ್ ನೀಡಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ. ಚುನಾವಣಾ ಆಯೋಗದ ವಿರುದ್ಧ ಸೆ.1ರಂದು ನಾಗರಿಕ ಸಂಘಟನೆಗಳ ವತಿಯಿಂದ ಸಾಕ್ಷ್ಯಾಧಾರಗಳೊಂದಿಗೆ ‘ಎಲೆಕ್ಷನ್ ಕಮಿಷನ್ ಚಲೋ’ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.

ಎಸ್‌ಐಆರ್ ಕುರಿತು ನಾಗರಿಕರಲ್ಲಿರುವ ಅನುಮಾನ ಹಾಗೂ ಆತಂಕಗಳನ್ನು ನಿವಾರಿಸಬೇಕಿದ್ದ ಚುನಾವಣಾ ಆಯೋಗ, ಈ ಬಗ್ಗೆ ಸಮರ್ಪಕ ಮಾಹಿತಿ ನೀಡದೆ ತಪ್ಪು ಮಾಹಿತಿಯನ್ನು ಹರಡುತ್ತಿದೆ. ಜನಜಾಗೃತಿ ಮೂಡಿಸುವ ನಡುವೆಯೂ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಬಿಎಲ್‌ಒಗಳಿಗೆ ಸಮರ್ಪಕ ತರಬೇತಿ ನೀಡದೆ ತರಾತುರಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor