×
Ad

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯು ಪಾರದರ್ಶಕವಾಗಿ ನಡೆಯಬೇಕು : ಸಂಸದ ಜಿ.ಕುಮಾರ ನಾಯಕ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2 : ಒಂದು ದಿನದ ವಿಚಾರ ಸಂಕಿರಣ

Update: 2025-09-14 22:05 IST

ರಾಯಚೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಿ.ದೇವರಾಜ ಅರಸು ಅವರ ಸಾಮಾಜಿಕ ಪರಿಕಲ್ಪನೆಯ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯದ ಮೂಲಕ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುವ ಈ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯು ಪಾರದರ್ಶಕವಾಗಿ ನಡೆಯಬೇಕು ಎಂದು ರಾಯಚೂರು ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಕುಮಾರ ನಾಯಕ ಅವರು ಹೇಳಿದರು.

ಅವರಿಂದು ನಗರದ ಕೃಷಿ ವಿಶ್ವ ವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಜಾಗೃತ ಕರ್ನಾಟಕ, ರಾಯಚೂರು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ಕರ್ನಾಟಕ ಸರ್ವ ಸಮುದಾಯಗಳ ಸಾಮಾಜಿಕ ನ್ಯಾಯ ಸಂರಕ್ಷಣಾ ಅಭಿಯಾನ ನೇತೃತ್ವದಲ್ಲಿ ಆಯೋಜಿಸಿದ ಕರ್ನಾಟಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2 ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರ್ ಮತ್ತು ದಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ದೂರದೃಷ್ಟಿಯ ಮಾದರಿಯಲ್ಲಿ ರಾಜ್ಯದಲ್ಲಿ ದಿ. ದೇವರಾಜು ಅರಸು ಅವರು ಉಳುವವನೇ ಭೂಮಿ ಒಡೆಯ ಕಾಯ್ದೆಯನ್ನು ಜಾರಿಗೆ ತರುವುದರ ಮೂಲಕ ಸಾಮಾಜಿಕ ನ್ಯಾಯದ ಕ್ರಾಂತಿಗೆ ಶ್ರಮಿಸಿದ್ದರು. ಅದರಂತೆ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಹಾವನೂರು ಅವರ ವೈಜ್ಞಾನಿಕ ವರದಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟರು ಹಾವನೂರು ಅವರು ದಿಟ್ಟತನದಿಂದ ನಿಂತು ದೇವರಾಜು ಅರಸರ ಸಾಮಾಜಿಕ ನ್ಯಾಯದ ಕ್ರಾಂತಿಗೆ ಎಲ್ ಜೆ ಹಾವನೂರು ಅವರು ಅಡಿಪಾಯ ಹಾಕಿದ ಧೀಮಂತ ನಾಯಕರು. ಸಾಮಾಜಿಕ ಸುಧಾರಣೆಗೆ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಾವನೂರು ಅವರು ಅಪಾರ ಕೊಡುಗೆ ನೀಡಿದ್ದಾರೆ. ಸಮ ಸಮಾಜದ ಕನಸು ಕಟ್ಟಬೇಕಾದರೆ ನಾವು ಕ್ರಿಯಾಶೀಲರಾಗಬೇಕು ಎಂದರು.

ಬೆಂಗಳೂರಿನ ಅಜೀಂಪ್ರೇಂಜಿ ವಿವಿಯ ಪ್ರಾಧ್ಯಾಪಕ ಪ್ರೊ.ನಾರಾಯಣ್ ಅವರು ಮಾತನಾಡಿ, ಸಾಮಾಜಿಕ ಪರಿಕಲ್ಪನೆಯನ್ನು ಎತ್ತಿಹಿಡಿದ ಅಂಬೇಡ್ಕರ್ ಮತ್ತು ದಿ.ದೇವರಾಜು ಅರಸು ಅಂತಹ ಮಹಾನ್ ನಾಯಕರನ್ನು ನಾವು ಸ್ಮರಿಸಬೇಕು. ಇಲ್ಲದಿದ್ದರೆ ಸಮಾಜದ ಕನಸು ನಿರ್ಮಾಣ ಅಸಾಧ್ಯ ಎಂದರು.

ಹಿಂದುಳುದ ವರ್ಗಗಳ‌ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಶಾಂತಪ್ಪ, ನಿವೃತ್ತ ಐಎಎಸ್ ಅಧಿಕಾರಿ ಎಲ್ ಕೆ ಅತೀಕ್ ಅವರು ಮಾತನಾಡಿದರು.

ನಿವೃತ್ತ ಪ್ರಾಧ್ಯಾಪಕ ಕೃಷ್ಣಪ್ಪ, ಜಾಗೃತ ಕರ್ನಾಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಮುತ್ತುರಾಜ, ಹಿಂದುಳಿದ ವರ್ಗಗಳ‌ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮಂತಪ್ಪ ಯಾದವ್, ಅಬಕಾರಿ ಇಲಾಖೆಯ ನಿವೃತ್ತ ಅಪರ ಆಯುಕ್ತ ಸಣ್ಣ ಭತ್ತಪ್ಪ, ಪತ್ರಕರ್ತ ವೆಂಕಟಸಿಂಗ್, ಆಂಜನೇಯ, ಕಾಂಗ್ರೆಸ್ ಮುಖಂಡ ಮುಹಮ್ಮದ್ ಶಾಲಂ, ಮುಹಮ್ಮದ್ ಇಕ್ಬಾಲ್, ವಕೀಲ ಜಾವಿದ್ ಉಲ್ ಹಕ್, ಬಸವಂತಪ್ಪ, ವಿ.ಲಕ್ಷ್ಮೀ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಆರೆಸ್ಸೆಸ್‌ ನವರು ಹಿಂದೂ ರಾಷ್ಟ್ರ ಕಟ್ಟಲು‌ ಮುಂದಾಗಿದ್ದಾರೆ. ಆದರೆ, ಸ್ವಾತಂತ್ರ್ಯ ಹೋರಾಟದಲ್ಲಿ ಅದರ ನಾಯಕರು ಪಾಲ್ಗೊಂಡಿಲ್ಲ, ನೆಹರು, ಇಂದಿರಾ ಗಾಂಧಿ ಅವರು ಏನು ಮಾಡಿದ್ದಾರೆ ಎಂದು ಕೇಳುವ ಅವರು ಆತ್ಮ ಅವಲೋಕನ ಮಾಡಿಕೊಳ್ಳಬೇಕು.

-ರವಿ ಬೋಸರಾಜು, ರಾಜ್ಯ ಕಾಂಗ್ರೆಸ್ ಯುವ ಮುಖಂಡ

 

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News