×
Ad

Raichur | ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿ: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್

ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ

Update: 2026-07-13 21:36 IST

ರಾಯಚೂರು: ಜಿಲ್ಲೆಯಲ್ಲಿ ಕುಡಿಯುವ ನೀರು, ಘನತ್ಯಾಜ ನಿರ್ವಹಣೆ, ಕೆರೆಗಳ ಸಂರಕ್ಷಣೆ ಸೇರಿದಂತೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಜಿಲ್ಲೆಯ ಅಧಿಕಾರಿಗಳು ಶ್ರಮಿಸಬೇಕೆಂದು ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜುಲೈ 13ರ ಸೋಮವಾರ ದಂದು ರಾಯಚೂರು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರು ಮಾತನಾಡಿದರು.

ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಾಲಕಾಲಕ್ಕೆ ಒದಗಿಸಲು ಸ್ವಂತ ಸುಪ್ರೀಂ ಕೋರ್ಟ್ ನ ನಿರ್ದೇಶನವಿದ್ದು, ಸಂಬಂಧಿಸಿದ ಅಧಿಕಾರಿಗಳು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ಒದಗಿಸುವ ಮೂಲಕ ಜನರಿಗೆ ವಿವಿಧ ಸೌಲಭ್ಯಗಳನ್ನು ನೀಡುವ ವಾತಾವರಣವನ್ನು ನಿರ್ಮಾಣ ಮಾಡಲು ಅಧಿಕಾರಿಗಳು ಶ್ರಮಿಸಬೇಕು. ಜನರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಕಾಲಕಾಲಕ್ಕೆ ಒದಗಿಸಬೇಕೆಂದರು.

ಜಿಲ್ಲೆಯಲ್ಲಿ ಮರಳುಗಾರಿಕೆ, ಅರಣ್ಯ ಸಂರಕ್ಷಣೆ ಹಾಗೂ ಗ್ರಾಮೀಣ ಭಾಗದ ಅಂಗಡಿ ಹಾಗೂ ಪಾನ್ ಬೀಡಾ ಅಂಗಡಿಗಳಲ್ಲಿ ಮದ್ಯ ಮಾರಾಟದ ಕುರಿತು ನಿಗಾ ನಿರ್ವಹಿಸಬೇಕು. ಆಕ್ರಮ ಮದ್ಯ ಮಾರಾಟದ ಮೇಲೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಈ ಹಿಂದೆ ಸರ್ಕಾರದಿಂದ ಮಹತ್ವ ಯೋಜನೆ ಕೈಗೊಳ್ಳಲಾಗಿದೆ. ಮಳೆ ಬರದೆ ಇರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಆರ್.ಒ ಪಾಂಟ್ಲ್ ಸಲುವಾಗಿ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಪ್ರಸ್ತುತ ಶೇ.50ರಷ್ಟು ಆರ್.ಒ ಪ್ಲಾಂಟ್‌ಗಳು ಸರಿಯಾಗಿ ನಿರ್ವಹಣೆ ಇಲ್ಲದೆ ಹಾಳಾಗಿವೆ. ಅವುಗಳನ್ನು ಸರಿಪಡಿಸಬೇಕು. ರಾಯಚೂರು ಜಿಲ್ಲೆಯ 811 ಹಳ್ಳಿಗಳ ಪೈಕಿ ಸುಮಾರು 700 ಹಳ್ಳಿಗಳಲ್ಲಿ ಆರ್.ಒ ಪ್ಲಾಂಟ್ ನೀಡಲಾಗಿದೆ. ದೇವದುರ್ಗ ಹಾಗೂ ಮಾನ್ವಿ ತಾಲೂಕಿನ ಹಳ್ಳಿಗಳಲ್ಲಿ ಜನರಿಗೆ ಶುದ್ಧ ನೀರು ಸಿಗದ ಕಾರಣ ಆರೋಗ್ಯದ ಸಮಸ್ಯೆ ಎದುರಾದ ಕುರಿತು ಲೋಕಾಯುಕ್ತರಿಂದ ಸ್ವಯಂ ಪ್ರಕರಣಗಳು ದಾಖಲಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ 319 ಕೆರೆಗಳಿದ್ದು, ಎಲ್ಲಾ ಕೆರೆಗಳ ಮೇಲೆ ಸಾರ್ವಜನಿಕ ಹಿತಶಕ್ತಿ ಪ್ರಕರಣದಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಎರಡು ಕೆರೆಗಳನ್ನು ಹೊರತುಪಡಿಸಿ ಎಲ್ಲ ಕೆರೆಗಳು ಸರ್ವೆ ಮಾಡಲಾಗಿದೆ. ಕೆರೆಯ ಅಭಿವೃದ್ಧಿ ಕುರಿತು ಯೋಜನೆಗಳನ್ನು ರೂಪಿಸಬೇಕು. ಕೆರೆಗಳನ್ನು ಅಭಿವೃದ್ಧಿ ಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಲೋಕಾಯುಕ್ತರು ಸೂಚಿಸಿದರು.

ನಗರದ ಸ್ವಚ್ಛತೆ ಕುರಿತು ಪ್ರತಿಯೊಬ್ಬ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು. ಮನೆಯ ಸ್ವಚ್ಛತೆಯಂತೆಯೇ, ನಗರ ಸ್ವಚ್ಛತೆಗೂ ಆದ್ಯತೆಯ ಮೇಲೆ ಪ್ರಾಮುಖ್ಯತೆ ನೀಡಲು ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬ ನಾಗರಿಕರು ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಲೋಕಾಯುಕ್ತ ಪೊಲೀಸ್ ರಾಯಚೂರು ಜಿಲ್ಲಾ ಅಧೀಕ್ಷಕರಾದ ಸಿದ್ದರಾಜು, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ರಾಯಚೂರು ಮಹಾನಗರ ಪಾಲಿಕೆಯ ಅಡಳಿತ ವಿಭಾಗದ ಉಪ ಆಯುಕ್ತ ಶರಣಪ್ಪ, ರಾಯಚೂರು ಮಹಾನಗರ ಪಾಲಿಕೆ ಸದಸ್ಯ ಕಾರ್ಯದರ್ಶಿ ಕೃಷ್ಣ, ಡಿಡಿಎಲ್.ಆರ್. ರೇಷ್ಮಾ ಪಾಟೀಲ್, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ತಿಮ್ಮಪ್ಪ ಬಿರಾದಾರ್, ಆಹಾರ ಇಲಾಖೆಯ ಉಪ ನಿರ್ದೇಶಕ ನಝೀರ್ ಅಹಮದ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಾಜೀದ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಲೋಕೋಪಯೋಗಿ ಇಲಾಖೆಯ ಇಇ ವೆಂಕಟೇಶ ಗಲಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News