×
Ad

ಎ.ವಸಂತಕುಮಾರ್‌ಗೆ ಸಚಿವ ಸ್ಥಾನ ನೀಡಲು ಮಲ್ಲಿಕಾರ್ಜುನ ಖರ್ಗೆಗೆ ತಲಕಾಯಿ ಮಾರೆಪ್ಪ ಮನವಿ

Update: 2026-07-08 21:45 IST

ರಾಯಚೂರು: ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗದ ಹಿರಿಯ ಉಪಾಧ್ಯಕ್ಷ ತಲಕಾಯ ಮಾರೆಪ್ಪ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.

ಬುಧವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ ಮನವಿ ಸಲ್ಲಿಸಿದ ಅವರು, ಎ. ವಸಂತಕುಮಾರ ಅವರು ಹಿಂದುಳಿದವರು, ದೀನ-ದಲಿತರು ಹಾಗೂ ಅಲ್ಪಸಂಖ್ಯಾತರ ಪರ ಕಾಳಜಿ ಹೊಂದಿರುವ ನಾಯಕರಾಗಿದ್ದು, ರಾಜ್ಯ ಮತ್ತು ರಾಷ್ಟ್ರಮಟ್ಟದ ರಾಜಕೀಯದ ಅನುಭವ ಹೊಂದಿದ್ದಾರೆ ಎಂದು ಹೇಳಿದರು.

ರಾಯಚೂರು ಜಿಲ್ಲೆಯ ಪ್ರಭಾವಿ ದಲಿತ ಮುಖಂಡ ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಎ. ವಸಂತಕುಮಾರ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡುವುದರಿಂದ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವರು ಹೊಂದಿರುವ ಕನಸುಗಳನ್ನು ಸಾಕಾರಗೊಳಿಸಲು ಅವಕಾಶ ದೊರೆಯಲಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News