×
Ad

ರಾಜ್ಯದ ಗೃಹಮಂತ್ರಿ ಕಳಂಕರಹಿತ ನಾಯಕ : ಡಾ.ಶರಣಪ್ರಕಾಶ್ ಪಾಟೀಲ್

Update: 2025-01-18 16:37 IST

ಡಾ.ಶರಣಪ್ರಕಾಶ್ ಪಾಟೀಲ್

ರಾಯಚೂರು : ಬೀದರ್ ದರೋಡೆ ಪ್ರಕರಣದ ಕುರಿತು ಅರೊಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿ.ಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಗೃಹ ಸಚಿವ ಡಾ.ಪರಮೇಶ್ವರ್ ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ, ಅವರು ಕಳಂಕರಹಿತ ನಾಯಕ ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಅವರಿಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ ಕೇವಲ ಊಹಾಪೋಹ ಇದರಲ್ಲಿ ಯಾವುದೇ ಹುರುಳಿಲ್ಲ. ಒಬ್ಬರಿಗೆ ಒಂದೇ ಹುದ್ದೆ ಎಂಬ ಮಾತಿಲ್ಲ. ಮುಖ್ಯಮಂತ್ರಿ ಅವರು ಸ್ಥಳೀಯ ಚುನಾವಣೆಯನ್ನು ಮಾಡಬೇಕೆಂದು ವ್ಯಕ್ತಪಡಿಸಿದ್ದಾರೆ. ಕಾನೂನು ತೊಡಕುಗಳನ್ನು ನಿವಾರಿಸಿದ ನಂತರ ಸ್ಥಳೀಯ ಚುನಾವಣೆ ಮಾಡಲಾಗುವುದು ಎಂದರು.

ಕೇಂದ್ರ ಬಿಜೆಪಿ ಸರಕಾರ ಈಡಿ, ಸಿಬಿಐ, ಆದಾಯ ತೆರಿಗೆ ಇಲಾಖೆಯನ್ನು ಕೈಗೊಂಬೆಯಾಗಿಸಿಕೊಂಡಿದೆ. ವಿರೋಧಪಕ್ಷದವರ ಮೇಲೆ ರೈಡ್ ಮಾಡಿಸಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇದೊಂದು ಕೆಟ್ಟ ರಾಜಕಾರಣ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಸಚಿವ ಎನ್.ಎಸ್.ಬೋಸರಾಜ, ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ, ಜಿಲ್ಲಾಧ್ಯಕ್ಷ ಬಸವರಾಜ ಪಾಟಿಲ್ ಇಟಗಿ, ಕೆ.ಶಾಂತಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಡಾ. ನಾಗವೇಣಿ ಎಸ್. ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News