ರಾಯಚೂರು: ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್; ಓರ್ವ ಮೃತ್ಯು, ಇಬ್ಬರಿಗೆ ಗಾಯ
Update: 2025-06-06 11:00 IST
ತಿಮ್ಮನಗೌಡ
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಅಮರೇಶ್ವರ ಕ್ರಾಸ್‌ನಿಂದ ದೇವರಭೂಪುರ ಗ್ರಾಮಕ್ಕೆ ಹೋಗುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಮೃತನನ್ನು ತಿಮ್ಮನಗೌಡ (32) ಎಂದು ಗುರುತಿಸಲಾಗಿದೆ. ಅಮರೇಶ ಹಾಗೂ ಶಂಕರಗೌಡ ಎನ್ನುವವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಲಿಂಗಸುಗೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.