ಆ.15ರಂದು ರಾಯಚೂರಿನಲ್ಲಿ ಟ್ರಾಮಾ ಕೇರ್ ಸೆಂಟರ್ ಉದ್ಘಾಟಣೆ
ರಾಯಚೂರು: ಇಲ್ಲಿನ ರಾಜೀವ್ ಗಾಂಧಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಆ.15ರ ಮಧ್ಯಾಹ್ನ 12 ಗಂಟೆಗೆ ಟ್ರಾಮಾ ಕೇರ್ ಸೆಂಟರ್ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಉದ್ಘಾಟಿಸುವರು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಘನ ಉಪಸ್ಥಿತಿ ವಹಿಸುವರು.
ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕರಾದ ಜೆ.ಟಿ.ಪಾಟೀಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಷಿ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ್ ಬಿ.ಪಾಟೀಲ್, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ರಾಯಚೂರು ಮಹಾನಗರ ಪಾಲಿಕೆಯ ಪ್ರಭಾರ ಅಧ್ಯಕ್ಷರಾದ ಸಾಜೀದ್ ಸಮೀರ್, ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಿತೇಶಕುಮಾರ ಸಿಂಗ್, ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಯಾದ ಮೊಹಮ್ಮದ್ ಮೊಹಸೀನ್, ಕಲಬುರಗಿ ವಿಭಾಗದ ಆಯುಕ್ತರಾದ ಜಹೀರಾ ನಸೀಮ್, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಡಾ.ಬಿ.ಎಲ್.ಸುಜಾತ ರಾಥೋಡ್, ಟ್ರಾಮಾ ಕೇರ್ ಸೆಂಟರ್ ವಿಶೇಷಾಧಿಕಾರಿ ಡಾ.ಬಾಲಾಜಿ ಪೈ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ. ರಮೇಶ್ ಬಿ. ಹೆಚ್., ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಿಶೇಷಾಧಿಕಾರಿ ಡಾ.ರಮೇಶ್ ಸಿ. ಸಾಗರ್, ಮತ್ತಿತರರು ಭಾಗವಹಿಸಲಿದ್ದಾರೆ.
ರಾಯಚೂರು ಜಿಲ್ಲೆಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ (ಒಪೆಕ್) ಆಸ್ಪತ್ರೆಯಲ್ಲಿ ಮೊದಲ ಸರ್ಕಾರಿ ಟ್ರಾಮಾ ಕೇಂದ್ರವನ್ನು ಉದ್ಘಾಟನೆಗೊಳ್ಳಲಿದ್ದು, ಟ್ರಾಮಾ ಸೆಂಟರ್ ಅನ್ನು ಹಂತ ಹಂತವಾಗಿ ಸ್ಥಾಪಿಸಿದ ನಂತರ ರಿಮ್ಸ್ ಆಸ್ಪತ್ರೆಯ ಸಂಪೂರ್ಣ ಮೂಳೆಚಿಕಿತ್ಸಾ ವಿಭಾಗವನ್ನು OPEC ಆಸ್ಪತ್ರೆಯಲ್ಲಿ ಸ್ಥಳಾಂತರಿಸಲಾಗುತ್ತದೆ. ಇದು ಎರಡರಿಂದ ಮೂರು ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಅಪಘಾತ ವೈದ್ಯಕೀಯ ತುರ್ತುಸ್ಥಿತಿಯನ್ನು ನಿರ್ವಹಿಸಲು 120 ಹಾಸಿಗೆಗಳ ಪೂರ್ಣ ಪ್ರಮಾಣದ ಟ್ರಾಮಾ / ಆರ್ಥೋ ವಾರ್ಡ್‌ಗಳನ್ನು ಇದರೊಂದಿಗೆ ಸ್ಥಾಪಿಸಲಾಗುವುದು, ಆಸ್ಪತ್ರೆಯಲ್ಲಿ ಪ್ರತ್ಯೇಕ ಹತ್ತು ಹಾಸಿಗೆಗಳ ತುರ್ತು ವಾರ್ಡ್ ಮತ್ತು ಹತ್ತು ಹಾಸಿಗೆಗಳ ತೀವ್ರ ನಿಗಾ ಘಟಕ (ICU) ವಾರ್ಡ್ ಅನ್ನು ಸಹ ಸ್ಥಾಪಿಸಲಾಗುವುದು, ಅಲ್ಲಿ ನರ ಶಸ್ತ್ರಚಿಕಿತ್ಸೆ, ಪ್ಲಾಸ್ಟಿಕ್ / ಸುಟ್ಟಗಾಯಗಳ ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿಗಳಿಗೆ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ರಿಮ್ಸ್ ಮುಖ್ಯಸ್ಥ ಡಾ.ರಮೇಶ ಬಿ. ತಿಳಿಸಿದ್ದಾರೆ.