ರಾಯಚೂರು: ಜು. 28 ರಂದು ಜಿಲ್ಲಾ ಮಟ್ಟದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ರಾಯಚೂರು: ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಜುಲೈ 28 ರಂದು ಮಧ್ಯಾಹ್ನ 2ಕ್ಕೆ ನಗರದ ಮಾ ಆಶಾಪೂರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಆಯೋಜಿಸಿದ್ದು ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ ಆಗಮಿಸಲಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ನಿರ್ಮಲಾ ಬೆಣ್ಣೆ ತಿಳಿಸಿದರು.
ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಎಇ, ಕರ್ನಾಟಕ ಮಹಿಳಾ ರಾಜ್ಯ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ ಪಾಲ್ಗೊಳ್ಳುವರು. ಗ್ಯಾರಂಟಿ ಯೋಜನೆಗಳ ಪೈಕಿ 3 ಯೋಜನೆ ಮಹಿಳೆಯರಿಗೆ ಸಹಕಾರಿಯಾಗಿವೆ. ಯೋಜನೆಯನ್ನು ಸದುಯೋಗ ಪಡೆದುಕೊಂಡವರು ಸರ್ಕಾರಕ್ಕೆ ಬೆಂಬಲಿಸಬೇಕು. ಮಹಿಳಾ ಕಾಂಗ್ರೆಸ್ ಸಂಘಟನೆ ಬಲಪಡಿಸುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು.
ಜಿಲ್ಲೆಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸುರೇಖಾ, ವಂದನಾ, ಆರತಿ, ಜ್ಯೋತಿ, ಶಾಂತ, ಮಂಜುಳಾ, ಎಸ್. ಪ್ರತಿಭಾ ರೆಡ್ಡಿ, ಶ್ರೀದೇವಿ ಉಪಸ್ಥಿತರಿದ್ದರು.