ವಿಶ್ವ ಸುಲಭ ಲಭ್ಯತೆ ದಿನಾಚರಣೆ; ಗಣ್ಯರಿಂದ ಪೋಸ್ಟರ್ ಬಿಡುಗಡೆ
Update: 2025-05-17 12:40 IST
ರಾಯಚೂರು, ಮೇ 16: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ರಿಮ್ಸ್ ಹಾಗೂ ದಿ ಅಸೋಷಿಯೇಷನ್ ಫಾರ್ ಪೀಪಲ್ ವಿತ್ ಡಿಸೆಬಿಲಿಟಿ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸುಗಮ್ಯ ಯಾತ್ರಾ ಕಾರ್ಯಕ್ರಮದಡಿಯಲ್ಲಿ ವಿಶ್ವ ಸುಲಭ ಲಭ್ಯತೆ ದಿನಾಚರಣೆ ಅಂಗವಾಗಿ ಮೇ 16ರಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿವಿಧ ಗಣ್ಯರಿಂದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್, ಜಿಲ್ಲಾಧಿಕಾರಿ ನಿತೀಶ್ ಕೆ., ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿ ಶ್ರೀದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶರಣಮ್ಮ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಂಘ, ಸಂಸ್ಥೆಯ ಮುಖಂಡರು ಇದ್ದರು.