ಲಿಂಗಸುಗೂರು (ರಾಯಚೂರು) : ಪಾದಯಾತ್ರೆಯು 6 ಕೋಟಿ ಕನ್ನಡಿಗರ ಆಶೋತ್ತರದ ಕಹಳೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ಲೇಷಿಸಿದರು.

ಕಹಳೆ ಊದುವ ಮೂಲಕ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದ ಬಳ್ಳಾರಿ ಚಲೋ ಪಾದಯಾತ್ರೆಯ ಉದ್ಘಾಟನೆ ನೆರವೇರಿಸಲಾಯಿತು. ರೈತಗೀತೆಯನ್ನು ಹಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಅಧಿಕಾರದ ಮದದಲ್ಲಿ ಮೆರೆಯುವ ರೈತ ವಿರೋಧಿ, ಜನವಿರೋಧಿ, ಪ್ರಗತಿವಿರೋಧಿ, ಮಹಿಳಾ ವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಿದ ಈ ಸರಕಾರವನ್ನು ಕಿತ್ತೊಗೆಯುವ ವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.

ಇದು ಚುನಾವಣಾ ಪ್ರಚಾರದ ಸಭೆ ಅಲ್ಲ; ಭ್ರಷ್ಟ ಕಾಂಗ್ರೆಸ್ ಸರಕಾರ ಕಿತ್ತೊಗೆಯುವ ಸಂಕಲ್ಪದೊಂದಿಗೆ ಹೋರಾಟ ಪ್ರಾರಂಭವಾಗಿದೆ. ಮುಖ್ಯಮಂತ್ರಿಗಳಿಗೆ ಸ್ವಾತಂತ್ರ್ಯ ಇದೆಯೇ? ಪ್ರತಿಯೊಂದಕ್ಕೂ ದೆಹಲಿಗೆ ಹೋಗಿ ರಾಹುಲ್ ಗಾಂಧಿ ಕಾಲು ಹಿಡಿಯುವ ನೀವು ಮುಖ್ಯಮಂತ್ರಿಯೇ?. ಇದು ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುತ್ತದೆಯೇ ಎಂದು ಕೇಳಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಕಾರ್ಯಕ್ರಮ ನಿರೂಪಿಸಿದರು. ಬರ ಪ್ರದೇಶ ಘೋಷಣೆಯಲ್ಲಿ ರಾಜ್ಯ ಸರಕಾರ ಅನ್ಯಾಯ ಮಾಡಿದೆ. ಪರಿಹಾರ ನೀಡುವಲ್ಲಿ ಕ್ರಮ ಕೈಗೊಂಡಿಲ್ಲ; ಪಾದಯಾತ್ರೆಯ ಒಂದೊಂದು ಹೆಜ್ಜೆಯೂ ಬಿಜೆಪಿ ರೈತಪರವಾಗಿದೆ. ಬಿಜೆಪಿ ಹೆಜ್ಜೆಯಲ್ಲಿ ದಲಿತ ಧ್ವನಿಯಿದೆ ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor