ಬೆಂಗಳೂರು | ಯುವತಿ ಅಪಹರಿಸಿ ಅತ್ಯಾಚಾರ ಆರೋಪ : ಐವರ ಬಂಧನ

Update: 2024-04-25 13:32 GMT

ಬೆಂಗಳೂರು : ನಗರದಲ್ಲಿ ಯುವತಿಯೊಬ್ಬಳನ್ನು ಕಾರಿನಲ್ಲಿ ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ವೆಸಗಿರುವ ಆರೋಪದಡಿ ಇಲ್ಲಿನ ಹೈಗ್ರೌಂಡ್ ಠಾಣೆಯ ಪೊಲೀಸರು ಐವರನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಶೇಷಾದ್ರಿಪುರಂ ನಿವಾಸಿ ಸುಮಾರು 23 ವರ್ಷದ ಯುವತಿಯನ್ನು ಕಳೆದ ಮೂರು ದಿನಗಳ ಹಿಂದೆ ಅಪಹರಿಸಿದ ಆರೋಪಿಗಳು, ನಂತರ ಆಕೆಯನ್ನು ಬೆಂಗಳೂರು ಹೊರವಲಯಕ್ಕೆ ಕರೆದೊಯ್ದು ಅತ್ಯಾಚಾರ ವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಅವರಿಂದ ತಪ್ಪಿಸಿಕೊಂಡು ಬಂದ ಯುವತಿ ಮನೆಯವರಿಗೆ ವಿಷಯ ತಿಳಿಸಿದ್ದು, ತಕ್ಷಣ ಕುಟುಂಬ ಸದಸ್ಯರು ಹೈಗ್ರೌಂಡ್ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪ್ರಕರಣದ ಗಂಭೀರತೆ ಅರಿತ ಪೊಲೀಸರು ತಕ್ಷಣವೇ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿ ಸ್ಥಳೀಯ ಸಿಸಿ ಕ್ಯಾಮೆರಾವನ್ನು ವಶಪಡಿಸಿಕೊಂಡು ಐವರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News