ಪ್ರಜಾಸೇವೆ ಆಂದೋಲನದ ಪ್ರಯೋಜನ ಪಡೆಯಿರಿ : ಸಚಿವ ಎಚ್.ಸಿ.ಬಾಲಕೃಷ್ಣ
ರಾಮನಗರ : ಸಾರ್ವಜನಿಕರು ಪ್ರಜಾಸೇವಾ ಆಂದೋಲನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಬಾಲಕೃಷ್ಣ ಕರೆ ನೀಡಿದ್ದಾರೆ.
ಶನಿವಾರ ಮಾಗಡಿ ತಾಲೂಕಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನಾ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮಾಗಡಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಬೆಳ್ಳಿಯಪ್ಪ, ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್, ಜಿಪಂ ಸಿಇಒ ಅನ್ಮೋಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಜಿಪಂ ಉಪ ಕಾರ್ಯದರ್ಶಿ ಧನರಾಜ್, ಮುಖ್ಯ ಯೋಜನಾಧಿಕಾರಿ ಚಿಕ್ಕ ಸುಬ್ಬಯ್ಯ, ತಹಶೀಲ್ದಾರ್ ರಂಜಿತ್, ನರಸಿಂಹ ಮೂರ್ತಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.