×
Ad

ಮೇ 15ರಂದು ಡಿಕೆಶಿ ಮುಖ್ಯಮಂತ್ರಿ ಆಗುವುದು ಖಚಿತ : ಇಕ್ಬಾಲ್ ಹುಸೇನ್

Update: 2026-04-28 20:24 IST

ಡಿ.ಕೆ.ಶಿವಕುಮಾರ್‌/ಇಕ್ಬಾಲ್ ಹುಸೇನ್

ರಾಮನಗರ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇ 15ಕ್ಕೆ ಮುಖ್ಯಮಂತ್ರಿ ಆಗುವುದು ಖಚಿತ ಎಂದು ರಾಮನಗರ ಕ್ಷೇತ್ರದ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.

ಮಂಗಳವಾರ ರಾಮನಗರ ತಾಲೂಕಿನ ಕೇತೋಹಳ್ಳಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದ ಚರ್ಚೆಗಳು ನಡೆಯುತ್ತಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಈ ಹಿಂದೆ ನಾನು ಎರಡು ಮೂರು ದಿನಾಂಕಗಳನ್ನು ತಿಳಿಸಿದ್ದೆ. ಆದರೆ, ಕಾರಣಾಂತರಗಳಿಂದ ಆಗ ಅವರು ಮುಖ್ಯಮಂತ್ರಿ ಆಗಲಿಲ್ಲ. ಆದರೆ, ಈ ಬಾರಿ ಖಂಡಿತವಾಗಿಯೂ ಅವರು ಆಗುತ್ತಾರೆ. ಮೇ 15 ಡಿ.ಕೆ.ಶಿವಕುಮಾರ್ ಅವರ ಜನ್ಮದಿನ. ಅಂದು ಅವರಿಗೆ ಮುಖ್ಯಮಂತ್ರಿ ಹುದ್ದೆಯ ಉಡುಗೊರೆ ಸಿಗಲಿದೆ. ಈ ಅವಧಿಯಲ್ಲೆ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರನ್ನೆ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಸುವಂತೆ ಕಾಂಗ್ರೆಸ್ ಹೈಕಮಾಂಡ್‍ಗೆ ಮನವಿ ಮಾಡಿರುವುದಾಗಿ ಮಾಜಿ ಸಚಿವ ಕೆ.ಎನ್.ರಾಜಣ್ಣ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಮುಖ್ಯಮಂತ್ರಿ ಬದಲಾವಣೆ ಬಯಸಿ ನಮ್ಮ ಅಭಿಪ್ರಾಯ ಹೇಳಿದ್ದೇವೆ. ಅದೇ ರೀತಿ ರಾಜಣ್ಣ ತಮ್ಮ ಅಭಿಪ್ರಾಯ ಹೇಳಿದ್ದಾರೆ ಎಂದು ತಿಳಿಸಿದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News