×
Ad

ಕಾಂಗ್ರೆಸ್‌ಗೆ ನಿಖಿಲ್ ಅಲ್ಲ, ನಾನೇ ದೊಡ್ಡ ಟಾರ್ಗೆಟ್ : ಎಚ್.ಡಿ.ಕುಮಾರಸ್ವಾಮಿ

Update: 2024-10-30 17:40 IST

ಚನ್ನಪಟ್ಟಣ : ʼಕಾಂಗ್ರೆಸ್ ನಾಯಕರಿಗೆ ನಿಖಿಲ್ ಕುಮಾರಸ್ವಾಮಿ ಟಾರ್ಗೆಟ್ ಅಲ್ಲ, ನಾನು ಟಾರ್ಗೆಟ್ ಆಗಿದ್ದೇನೆʼ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಬುಧವಾರ ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ʼಉಪ ಚುನಾಣೆಯಲ್ಲಿ ನಿಖಿಲ್ ಸೋಲಿಸಲು ಕಾಂಗ್ರೆಸ್ ದೊಡ್ಡ ಕುತಂತ್ರ ರೂಪಿಸಿದೆ. ಅದರಿಂದ ನನ್ನ ಮುಂದಿನ ಬೆಳವಣಿಗೆ ಕುಗ್ಗಿಸಬಹುದು ಎಂದು ಅವರು ಲೆಕ್ಕಾಚಾರ ಮಾಡಿದ್ದಾರೆ. ರಾಜಕೀಯವಾಗಿ ನನ್ನನ್ನು ಮುಗಿಸಬೇಕೆಂದು ಹೊರಟಿದ್ದಾರೆ. ನಾನು ಕೇಂದ್ರ ಮಂತ್ರಿಯಾಗಿರುವುದನ್ನು ಅವರು ಸಹಿಸುತ್ತಿಲ್ಲ. ಅವರಿಗೆ ನಿಖಿಲ್ ಗಿಂತ ನಾನೇ ದೊಡ್ಡ ಟಾರ್ಗೆಟ್ ಆಗಿದ್ದೇನೆ. ಅವರ ಯಾವುದೇ ಕುತಂತ್ರಗಳು ಚನ್ನಪಟ್ಟಣದ ಜನತೆ ಮುಂದೆ ನಡೆಯಲ್ಲʼ ಎಂದರು

ಶಿಗ್ಗಾಂವಿ ಖಾದ್ರಿ ಕಿಡ್ನಾಪ್ ಮಾಡಿ ಗೃಹಬಂಧನ :

ಮುಸ್ಲಿಂ ಮತಗಳಿಗೆ ಎಲ್ಲಾ ರಾಜಕೀಯ ಪಕ್ಷಗಳು ಟಾರ್ಗೆಟ್ ಮಾಡಿವೆ ಎನ್ನುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರು ಯಾವಾಗಲೂ ಟಾರ್ಗೆಟ್ ಎನ್ನುವುದು ಎಲ್ಲರಿಗೂ ಗೊತ್ತಿದೆ. ಅವರು ಯಾರನ್ನಾದರೂ ಟಾರ್ಗೆಟ್ ಮಾಡಿಕೊಳ್ಳಲಿ. ನಾವು ಮಾತ್ರ ನಮ್ಮ ಕೆಲಸಗಳ ಆಧಾರದ ಮೇಲೆ ಮತ ಕೊಡಿ ಎಂದು ಕೇಳುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಾಂಗ್ರೆಸ್ ಯಾವ ಮಟ್ಟಿಗೆ ಮುಸ್ಲಿಮರನ್ನು ಟಾರ್ಗೆಟ್ ಮಾಡಿದೆ ಎನ್ನುವುದಕ್ಕೆ ಶಿಗ್ಗಾಂವಿ ಕಾಂಗ್ರೆಸ್ ಮುಖಂಡ ಅಜ್ಜಂಪೀರ್ ಖಾದ್ರಿ ಅವರನ್ನು ಕಿಡ್ನಾಪ್ ಮಾಡಿ, ಅವರನ್ನು ಕಳೆದ ಒಂದು ವಾರದಿಂದ ಕೂಡಿ ಹಾಕಿಕೊಂಡಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು ನಾಮಪತ್ರ ವಾಪಸ್ ತೆಗೆಸುತ್ತಿದ್ದಾರೆ. ಒಂದು ವಾರದಿಂದ ಈ ರೀತಿಯ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News