×
Ad

ವರ್ಗಾವಣೆ ದಂಧೆ ವಿಚಾರಕ್ಕೆ ಸಚಿವರು ಕಿತ್ತಾಡಿಕೊಂಡಿದ್ದಾರೆ : ಕುಮಾರಸ್ವಾಮಿ

Update: 2024-11-10 14:35 IST

ಚನ್ನಪಟ್ಟಣ : ಮೈಸೂರಿನಲ್ಲಿ ಸಚಿವರು ಹಾಗೂ ಇನ್ನಿತರರು ಹೊಡೆದಾಡಿ ಕೊಂಡಿರುವುದು ವರ್ಗಾವಣೆ ದಂಧೆ ವಿಚಾರಕ್ಕೆ ಎನ್ನುವ ಮಾಹಿತಿ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶನಿವಾರ ಚನ್ನಪಟ್ಟಣದ ಪ್ರಚಾರದ ನಡುವೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ವರ್ಗಾವಣೆ ವ್ಯವಹಾರಕ್ಕೆ ಅವರು ಕಿತ್ತಾಡಿಕೊಂಡಿದ್ದಾರೆ. ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಹಂಚಿಕೆ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಒಬ್ಬ ಮಂತ್ರಿಯನ್ನು ಬಹಿರಂಗವಾಗಿ ಹೊಡೆಯುತ್ತಾರೆ ಎಂದರೆ ಈ ರಾಜ್ಯ ಎಲ್ಲಿಗೆ ಬಂದಿದೆ? ಎಂಬುದನ್ನು ಗಮನಿಸಬೇಕು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News