ಸಾಂದರ್ಭಿಕ ಚಿತ್ರ | Photo credit : PTI

ಬೆಂಗಳೂರು : ಜಮೀನಿನಲ್ಲಿ ಹೂವು ಕೀಳಲು ತೆರಳಿದ್ದ ಅರ್ಚಕರೊಬ್ಬರು ಚಿರತೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಾಗಡಿ ತಾಲೂಕಿನ ಮಾಡಬಾಳ್ ಹೋಬಳಿಯ ಕಲ್ಲುದೇವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲುದೇವನಹಳ್ಳಿ ಗ್ರಾಮದ ಮಹದೇಶ್ವರಸ್ವಾಮಿ ದೇವಸ್ಥಾನದ ಅರ್ಚಕ ಶಿವಸ್ವಾಮಿ(60) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಶಿವಸ್ವಾಮಿ ತಮ್ಮ ಜಮೀನಿನಲ್ಲಿ ಕಾಕಡ ಹೂವುಗಳನ್ನು ಬೆಳೆದಿದ್ದರು. ಎಂದಿನಂತೆ ಹೂವು ಕೀಳಲು ಜಮೀನಿಗೆ ತೆರಳಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದ ಚಿರತೆ, ಶಿವಸ್ವಾಮಿ ಅವರ ಕುತ್ತಿಗೆ ಹಾಗೂ ತಲೆಯ ಭಾಗಕ್ಕೆ ಕಚ್ಚಿ ಕೊಂದು ಹಾಕಿದೆ.

ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆಯನ್ನು ಆದಷ್ಟು ಬೇಗ ಸೆರೆಹಿಡಿಯಲು ಕ್ರಮ ಕೈಗೊಳ್ಳಲಾಗುವುದು. ಮೃತರ ಕುಟುಂಬಕ್ಕೆ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor