ಮಾಗಡಿ | ಕಾಂಗ್ರೆಸ್ ನಾಯಕ ಎಚ್.ಎಂ.ರೇವಣ್ಣರ ಪುತ್ರನ ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು
Update: 2025-12-12 15:01 IST
ಮಾಗಡಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಪುತ್ರ ಆರ್. ಶಶಾಂಕ್ ಅವರ ಕಾರು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ತಾಲೂಕಿನ ಗುಡೇಮಾರನಹಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತರನ್ನು ಬೆಳಗುಂಬ ಗ್ರಾಮದ ರಾಜೇಶ್ (27) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು, ಕೆಲಸ ಮುಗಿಸಿ ರಾತ್ರಿ 10 ಗಂಟೆ ಸುಮಾರಿಗೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಜೇಶ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಮಾಗಡಿಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಶಶಾಂಕ್ ಅವರಿದ್ದ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ರಾಜೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಆಗಮಿಸಿದ ಕುದೂರು ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.