×
Ad

ಮಾದಪಟ್ಟಣ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಮೃತ್ಯು

Update: 2026-07-02 11:37 IST

Screengrab: X/@PTI_News

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಕ್ರಷರ್ ಬಳಿಯೇ ವಾಸಿಸುತ್ತಿದ್ದರು ಎನ್ನಲಾಗಿದೆ. 

ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್​ ಗೌಡ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ತಂಡದವರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮೃತರು ಬಿಹಾರ ಮೂಲದವರೆಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. 



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News