×
Ad

ಚನ್ನಪಟ್ಟಣ ನಗರಸಭೆಯ ಏಳು ಬಿಜೆಪಿ ಸದಸ್ಯರ ಪೈಕಿ ಆರು ಮಂದಿ ಕಾಂಗ್ರೆಸ್ ಸೇರ್ಪಡೆ

Update: 2024-10-29 15:01 IST

ಚನ್ನಪಟ್ಟಣ, ಅ.29: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ದಿನಗಣನೆ ನಡೆದಿರುವಾಗ ಬಿಜೆಪಿ ಮತ್ತು ಜೆಡಿಎಸ್ ಗೆ ಕಾಂಗ್ರೆಸ್ ಬಿಗ್ ಶಾಕ್ ನೀಡಿದೆ.

ಚನ್ನಪಟ್ಟಣ ನಗರಸಭೆಗೆ ಬಿಜೆಪಿಯಿಂದ ಗೆದ್ದಿದ್ದ ಏಳು ಸದಸ್ಯರ ಪೈಕಿ ಆರು ಮಂದಿ ಮಾಜಿ ಸಂಸದ ಡಿ.ಕೆ.ಸುರೇಶ್ ಸಮ್ಮುಖದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಈ ಸಂದರ್ಭದಲ್ಲಿ ಬಿಎಂಐಸಿಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ ಉಪಸ್ಥಿತರಿದ್ದರು.

ಚನ್ನಪಟ್ಟಣ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚನ್ನಪಟ್ಟಣ ನಗರಸಭಾ ಬಿಜೆಪಿ ಸದಸ್ಯರಾದ ಚಂದ್ರು, ಮಂಗಳಮ್ಮ, ಮನೋಹರ್, ಕಮಲ, ಜಯಮಾಲ, ಕಸ್ತೂರಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.

2021-22 ರಲ್ಲಿ ಇವರು ನಗರಸಭೆಗೆ ಬಿಜೆಪಿಯಿಂದ ಆಯ್ಕೆ ಆಗಿದ್ದರು. ಒಟ್ಟು 31 ಸದಸ್ಯರ ಪೈಕಿ ಏಳು ಮಂದಿ ಬಿಜೆಪಿಯಿಂದ ಗೆದ್ದಿದ್ದರು. 16 ಮಂದಿ ಜೆಡಿಎಸ್ ನಿಂದ ಗೆದ್ದಿದ್ದರು.

ಎರಡು ತಿಂಗಳ ಹಿಂದೆ 13 ಮಂದಿ ಜೆಡಿಎಸ್ ಸದಸ್ಯರು ಆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News