ಪರಿಶಿಷ್ಟ ಜಾತಿಯ ಸಮೀಕ್ಷೆ ಅವಧಿ ಜೂ.30ರ ವರೆಗೆ ವಿಸ್ತರಣೆ
ಬೆಂಗಳೂರು : ಒಳಮೀಸಲಾತಿ ಜಾರಿಗಾಗಿ ವೈಜ್ಞಾನಿಕ ದತ್ತಾಂಶ ನೀಡಲು ನ್ಯಾ.ಎಚ್.ಎನ್. ನಾಗಮೋಹನ್‍ದಾಸ್ ಏಕ ಸದಸ್ಯ ಆಯೋಗದ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಅವಧಿಯನ್ನು ರಾಜ್ಯಾದ್ಯಂತ ಜೂ.30ರ ವರೆಗೆ ವಿಸ್ತರಿಸಲಾಗಿದೆ.
ಈ ವರೆಗೂ ರಾಜ್ಯಾದ್ಯಂತ ಪರಿಶಿಷ್ಟ ಜಾತಿಯ ಸಮೀಕ್ಷೆಯಲ್ಲಿ ಶೇ.91ರಷ್ಟು ಪ್ರಗತಿ ಸಾಧಿಸಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಶೇ.50ರಷ್ಟು ಮಾತ್ರ ಪ್ರಗತಿಯಾಗಿದೆ. ಆದ್ದರಿಂದ ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಅಂತಿಮ ಅವಕಾಶ ಕಲ್ಪಿಸಲು ಜೂ.23ರಿಂದ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳು ಹಾಗೂ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ವಾರ್ಡ್ ಕಚೇರಿಗಳಲ್ಲಿನ ಪ್ರತ್ಯೇಕ ಶಿಬಿರಗಳ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು. ಅಥವಾ https://schedulecastesurvey.karnataka.gov.in/selfd eclaration ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.