×
Ad

ಶಿವಮೊಗ್ಗ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಧರಣಿ

Update: 2025-08-12 23:29 IST

ಶಿವಮೊಗ್ಗ ಆ.12 : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಆ.12 ರಿಂದ ಮೂರು ದಿನಗಳ ಕಾಲ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು, ಮಂಗಳವಾರ ನಗರದ ಮಹಾವೀರ ವೃತ್ತದಲ್ಲಿ ಧರಣಿ ನಡೆಸಿದರು.

ಕಳೆದ ಜನವರಿ ತಿಂಗಳಲ್ಲಿ ರಾಜ್ಯದ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಸತತ ನಾಲ್ಕು ದಿನಗಳ ಹೋರಾಟ ಕೈಗೊಂಡಾಗ, ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳು ಪ್ರತಿಯೊಬ್ಬರಿಗೂ ಕೇಂದ್ರದ ಭಾಗಶಃ ಪ್ರೋತ್ಸಾಹಧನ ಮತ್ತು ರಾಜ್ಯದ ಗೌರವ ಧನಗಳನ್ನು ಕ್ರೋಢೀಕರಿಸಿ ಕನಿಷ್ಠ 10,000ರೂ, ಗೌರವಧನ ಗ್ಯಾರಂಟಿ ಮಾಡುತ್ತೇವೆ. ಬಜೆಟ್‌ನಲ್ಲಿ ಸಹ ಹೆಚ್ಚಳ ಘೋಷಿಸುತ್ತೇವೆ ಎಂದು ಮಾತು ಕೊಟ್ಟಿದ್ದರು. ಈಗ 7 ತಿಂಗಳು ಕಳೆದಿದೆ. ಕೊಟ್ಟಮಾತು ಈಡೇರಿಸದೇ ಗುಬ್ಬಿಮೇಲೆ ಬ್ರಹ್ಮಾಸ್ತ್ರ ಪ್ರಯೋಗಿ ಸುವಂತೆ ನತದೃಷ್ಟ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದುಹಾಕಿ ಬೀದಿಪಾಲು ಮಾಡಲು ಹೊರಟಿದ್ದಾರೆ. ಕೂಡಲೇ ಮುಖ್ಯಮಂತ್ರಿ ಘೋಷಿಸಿದ ಕನಿಷ್ಠ 10 ಸಾವಿರ ರೂ. ಗೌರವಧನ ಎಪ್ರಿಲ್‌ನಿಂದಲೇ ಅನ್ವಯವಾಗುವಂತೆ ಬಿಡುಗಡೆಗೊಳಿಸಬೇಕು. ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಹೋರಾತ್ರಿ ಧರಣಿಯನ್ನು ಮುಂದುವರಿಸಿದ್ದಾರೆ.

ಈ ಸಂದರ್ಭ ಜಿಲ್ಲಾಧ್ಯಕ್ಷ ರಾಜೇಶ್ವರಿ, ಚಂದ್ರಕಲಾ, ಸರಸ್ವತಿ, ರೇಣುಕಾ ಮೊದಲಾದವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News