ಶಿವಮೊಗ್ಗ: ಸಬ್ ರಿಜಿಸ್ಟ್ರಾರ್ ಕಚೇರಿಗೆ ಲೋಕಾಯುಕ್ತ ದಾಳಿ
Update: 2025-10-16 23:25 IST
ಶಿವಮೊಗ್ಗ, ಅ.16: ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದಲ್ಲಿ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ 7 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಗುರುವಾರ ದಾಳಿ ನಡೆಯಿತು.
ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ ದೂರು ಬಂದ ಹಿನ್ನೆಲೆಯಲ್ಲಿ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದರು. ಬೆಳಗ್ಗೆ 11 ಗಂಟೆಗೆ ಆಗಮಿಸಿದ ಅಧಿಕಾರಿಗಳು ಸಂಜೆಯವರೆಗೂ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು ಎಂದು ತಿಳಿದು ಬಂದಿದೆ.
ಜೂ.9ರಂದು ಸಬ್ ರಿಜಿಸ್ಟ್ರಾರ್ ಕಚೇರಿ ಎಪಿಎಂಸಿ ಯಾರ್ಡ್‌ನ ಮುಂಭಾಗಕ್ಕೆ ಸ್ಥಳಾಂತರವಾಗಿತ್ತು. ಸ್ಥಳಾಂತರ ಆದ ನಂತರ ಮೊದಲ ಬಾರಿ ಲೋಕಾಯುಕ್ತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ