×
Ad

ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಶಾಸಕ ಸಂಗಮೇಶ್ವರ್

Update: 2025-11-06 23:23 IST

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ 

ಶಿವಮೊಗ್ಗ : ಚುನಾವಣೆ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಘೋಷಣೆ ಮಾಡಿದ್ದಾರೆ.

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಗುರುವಾರ ನಡೆದ ಪಂಚ ಗ್ಯಾರಂಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದೇ ನನ್ನ ಕೊನೆಯ ಚುನಾವಣೆ, ಇಷ್ಟು ವರ್ಷ ನೀವು ನಿಮ್ಮ ಸಹೋದರ ಎಂದು ನನಗೆ ಆಶೀರ್ವಾದ ಮಾಡಿದಂತೆ ಮುಂದಿನ ಚುನಾವಣೆಯಲ್ಲಿ ನನ್ನ ಮಗ ಗಣೇಶ್ ಅವರಿಗೆ ನಿಮ್ಮ ಬೆಂಬಲ ಮತ್ತು ಆಶೀರ್ವಾದ ಇರಲಿ ಎಂದು ಇದೇ ವೇಳೆ ಬಿ.ಕೆ.ಸಂಗಮೇಶ್ವರ್ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News