ಭಾರಿ ಮಳೆ ಹಿನ್ನೆಲೆ; ಹೊಸನಗರ ತಾಲೂಕಿನಾದ್ಯಂತ ಜೂ.16 ರಂದು ಶಾಲೆ, ಕಾಲೇಜುಗಳಿಗೆ ರಜೆ
Update: 2025-06-16 08:15 IST
ಶಿವಮೊಗ್ಗ:ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಜೂ.16 ರ ಸೋಮವಾರ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.
ಸಾಗರ ಹಾಗೂ ಹೊಸನಗರ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.