×
Ad

ಆಗುಂಬೆ | ತೀವ್ರ ಮಳೆ ; ಕಾರ್ ಬೈಲು ಗುಡ್ಡ ಕುಸಿತ

Update: 2024-09-04 21:30 IST

ಕಾರ್ ಬೈಲು ಗುಡ್ಡ ಕುಸಿತ

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿಯ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿರುವ ಘಟನೆ ನಡೆದಿದೆ.

ಸೋಮವಾರ ತಡರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.

ಕಲ್ಲು ಬಂಡೆಯ ಮೇಲೆ ಇದ್ದ ಮಣ್ಣು, ಗಿಡ ಮರಗಳು ಅಂದಾಜು 50 ಅಡಿ ಕುಸಿದಿವೆ. ಸುತ್ತಮುತ್ತ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ. ಅತಿಯಾದ ಮಳೆಯಿಂದ ಗುಡ್ಡ ಕುಸಿದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ತೀರ್ಥಹಳ್ಳಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ಇರುವ ಬಿಳ ಚಿಕಟ್ಟೆಯಿಂದ ಗುಡ್ಡ ಕುಸಿತ ವೀಕ್ಷಿಸಬಹುದಾಗಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News