×
Ad

ಭದ್ರಾವತಿ ಶಾಸಕರ ಪುತ್ರನ ಹತ್ಯೆಗೆ ಸಂಚು ಆರೋಪ: ನಾಲ್ವರ ವಿರುದ್ಧ ಪ್ರಕರಣ ದಾಖಲು

Update: 2024-08-22 11:21 IST

ಬಸವೇಶ್ 

ಶಿವಮೊಗ್ಗ: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ಹತ್ಯೆಗೆ ಸಂಚು ಹೂಡಿರುವ ಆರೋಪದಲ್ಲಿ ನಾಲ್ವರ ವಿರುದ್ಧ ಭದ್ರಾವತಿ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಚ್ಚಿ ಮುಬಾರಕ್, ಟಿಪ್ಪು ಸೇರಿದಂತೆ ನಾಲ್ವರ ವಿರುದ್ಧ ಗುತ್ತಿಗೆದಾರ ಸುನೀಲ್ ಎಂಬವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.

ಜೈಲಿನಲ್ಲಿರುವ ಡಿಚ್ಚಿ ಮುಬಾರಕ್ ಭದ್ರಾವತಿಯ ಮುಬಾರಕ್ ಎಂಬಾತನಿಗೆ ಕರೆ ಮಾಡಿ, ಭದ್ರಾವತಿ ಗಾಂಧಿ ಸರ್ಕಲ್ ಬಳಿ ಬಸವೇಶ್ ನನ್ನು ಹತ್ಯೆ ಮಾಡುವಂತೆ ಟಿಪ್ಪು ಮತ್ತು ಇತರ ನಾಲ್ವರನ್ನು ಕಳುಹಿಸುತ್ತಿರುವುದಾಗಿ ತಿಳಿಸಿದ್ದ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಟಿಪ್ಪು ತನಗೆ ಮಾಹಿತಿ ನೀಡಿದ್ದು, ಚಾಕುವೊಂದನ್ನು ಕೂಡ ತೋರಿಸಿದ್ದ ಎಂದು ಸುನೀಲ್ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News