×
Ad

ಬಂಟ್ವಾಳ : ಬೆಂಕಿ ಆಕಸ್ಮಿಕ; ಮನೆ ಸಂಪೂರ್ಣ ಭಸ್ಮ

Update: 2024-03-30 14:43 IST

ಬಂಟ್ವಾಳ : ಆಕಸ್ಮಿಕವಾಗಿ ಬೆಂಕಿ ತಗುಲಿ ಕೂಲಿ ಕಾರ್ಮಿಕ ಮಹಿಳೆಯೋರ್ವರ ಮನೆ ಸಂಪೂರ್ಣವಾಗಿ ಭಸ್ಮವಾದ ಘಟನೆ ಕುಕ್ಕಿಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲಿಯನಡುಗೋಡು ಎಂಬಲ್ಲಿ ನಡೆದಿದೆ.

ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ ಮೋನಮ್ಮ ಎಂಬವರ ಮನೆಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂ ಮೌಲ್ಯದ ಮನೆ ಸಂಪೂರ್ಣ ಭಸ್ಮವಾಗಿದೆ.

ಮೋನಮ್ಮ‌ಅವರು ತಮ್ಮ ಇಬ್ಬರು ಮಕ್ಕಳ ಜೊತೆ ಪೂಂಜಾ ದೇವಸ್ಥಾನದಲ್ಲಿ ನಡೆಯುವ ಜಾತ್ರೆ ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ರಾತ್ರಿ ವೇಳೆ ಹೊಗೆ ಕಂಡ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಅದಾಗಲೇ ಬೆಂಕಿ ಮನೆಯನ್ನು ಆವರಿಸಿಕೊಂಡಿತ್ತು.

ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಯಿಂದ ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರು, ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಸದಸ್ಯೆ ಶೋಭಾ, ಪಿಡಿಒ ಪದ್ಮನಾಭ ನಾಯ್ಕ್ ಅವರು ಭೇಟಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News