×
Ad

ಸಕಲ ಸರಕಾರಿ ಗೌರವದೊಂದಿಗೆ ಬೇಗಾನೆ ರಾಮಯ್ಯ ಅಂತ್ಯಸಂಸ್ಕಾರ

Update: 2025-04-25 23:40 IST

ಶಿವಮೊಗ್ಗ : ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಬೇಗಾನೆ ರಾಮಯ್ಯ ಅವರ ಅಂತ್ಯಸಂಸ್ಕಾರವು ತಾಲೂಕಿನ ಹೊಸಹಳ್ಳಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಶುಕ್ರವಾರ ನೆರವೇರಿತು.

ಸಚಿವ ಮಧು ಬಂಗಾರಪ್ಪ, ಸ್ಪೀಕ‌ರ್ ಯು.ಟಿ.ಖಾದರ್ ಸೇರಿ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬೇಗಾನೆ ರಾಮಯ್ಯನವರ ನಿಧನವು ಮಲೆನಾಡಿನ ರಾಜಕೀಯ ರಂಗಕ್ಕೆ ತುಂಬಲಾರದ ನಷ್ಟ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿ ಸದಾ ಸ್ಮರಣೀಯ. 'ಬೋರ್ ವೆಲ್ ರಾಮಯ್ಯ' ಎಂದೇ ಖ್ಯಾತಿ ಪಡೆದಿದ್ದ ಅವರು ಮಲೆನಾಡಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸಿದವರು. ಅವರ ಸೇವೆ ಸದಾ ಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಜಿ.ಡಿ ಮಂಜುನಾಥ್, ಎಚ್.ಎಂ ಮಧು, ಪ್ರಮುಖರಾದ ಶಮಂತ್ ಮತ್ತಿತರರಿದ್ದರು. ಸಂಜೆ 4 ಗಂಟೆಗೆ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿತು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News