×
Ad

Bhadravathi | ಒಂದೇ ಕುಟುಂಬದ ನಾಲ್ವರು ನೀರುಪಾಲು

Update: 2026-01-18 19:50 IST

ಶಿವಮೊಗ್ಗ: ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್​ನ ಭದ್ರಾ ನಾಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ಮೃತರು ಎಂದು ತಿಳಿದು ಬಂದಿದೆ.

ಮಾರಿ ಹಬ್ಬಕ್ಕೆಂದು ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್​​ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ ವೇಳೆ ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾರೆ. ಒಬ್ಬರು ಕಾಲು ಜಾರಿ ಭದ್ರಾ ನಾಲೆಗೆ ಬಿದ್ದಿದ್ದು, ಅವನ್ನು ರಕ್ಷಿಸಲು ಹೋಗಿ ನಾಲ್ವರೂ ನೀರುಪಾಲಾಗಿದ್ದಾರೆ ಎನ್ನಲಾಗಿದೆ.

ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು. ಸದ್ಯ ಮೃತದೇಹಗಳಿಗಾಗಿ ಹೊಳೆಹೊನ್ನೂರು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧಕಾರ್ಯ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News