ಸಾಗರ ಉಪವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಎನ್.ಜೆ ಬೆನಕ ಪ್ರಸಾದ್ ನೇಮಕ
Update: 2025-08-06 12:42 IST
ಶಿವಮೊಗ್ಗ: ಜಿಲ್ಲೆಯ ಸಾಗರ ಉಪವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಎನ್.ಜೆ ಬೆನಕ ಪ್ರಸಾದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದ ಡಾ. ಬೆನಕ ಪ್ರಸಾದ್ ಯುಪಿಎಸ್ಸಿ ಪರೀಕ್ಷೆಯಲ್ಲಿ 92ನೇ ರ್‍ಯಾಂಕ್ ಪಡೆದು ಕರ್ನಾಟಕ ಕೇಡರ್ ಆಗಿ ಆಯ್ಕೆಯಾಗಿದ್ದರು.
ಈಗ ರಾಜ್ಯ ಸರ್ಕಾರ ಸಾಗರ ಉಪವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿದೆ.