ಸಾಗರ | ಕೋಮು ಪ್ರಚೋದನಾಕಾರಿ ಭಾಷಣ ಆರೋಪ; ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿರುದ್ಧ ಪ್ರಕರಣ ದಾಖಲು
Update: 2025-01-14 21:13 IST
ಅರುಣ್ ಕುಗ್ವೆ
ಸಾಗರ : ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ವಿರುದ್ಧ ಸಾಗರ ಪೇಟೆ ಪೋಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಖಂಡಿಸಿ ಸಾಗರ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಅರಣ್ ಕುಗ್ವೆ ಕೋಮು ಭಾವನೆ ಕೆರಳಿಸುವ, ದ್ವೇಷ ಭಾವನೆ ಮೂಡುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಸಾಗರ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಕೆ.ಅಝೀಂ ಇಲ್ಲಿನ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.