×
Ad

ಕೆಲವೇ ದಿನಗಳಲ್ಲಿ ಜಿ.ಟಿ.ದೇವೇಗೌಡ ಕಾಂಗ್ರೆಸ್ ಸೇರ್ಪಡೆ: ಸಚಿವ ಮಧು ಬಂಗಾರಪ್ಪ

Update: 2023-11-15 11:55 IST

ಬೆಂಗಳೂರು, ನ.15: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಈಗಾಗಲೇ ಕೆಲವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಲವೇ ದಿನಗಳಲ್ಲಿ ಜಿ.ಟಿ.ದೇವೇಗೌಡ ಕಾಂಗ್ರೆಸ್ ಪಕ್ಷ ಸೇರುತ್ತಾರೆ. ಅವರು ನಮಗೆ ಬಹಳ ಹಳಬರು, ಸ್ವಲ್ಪ ದಿನ ದೂರವಾಗಿದ್ದರು. ಈಗ ಮತ್ತೆ ಪಕ್ಷಕ್ಕೆ ಹತ್ತಿರವಾಗಲಿದ್ದಾರೆ. ನಮ್ಮ ಹತ್ತಿರವೇ ಇರುವ ಹಾಗೆ ನೋಡಿಕೊಳ್ಳುತ್ತಿದ್ದೇವೆ. ಶಾಸಕ ಚನ್ನಬಸಪ್ಪ ಕೂಡ ಈಗಾಗಲೇ ನಮ್ಮ ಹತ್ತಿರದಲ್ಲಿದ್ದಾರೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News