×
Ad

ಅಗತ್ಯ ಬಿದ್ದರೆ ಸಚಿವ ಸ್ಥಾನಕ್ಕಾಗಿ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತೇನೆ : ಶಾಸಕ ಗೋಪಾಲಕೃಷ್ಣ

"ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ"

Update: 2025-11-04 15:57 IST

ಗೋಪಾಲಕೃಷ್ಣ ಬೇಳೂರು

ಸಾಗರ : ಅಗತ್ಯ ಬಿದ್ದರೆ ಸಚಿವ ಸ್ಥಾನಕ್ಕಾಗಿ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತೇನೆ. ನಾನು ಮೂರು ಬಾರಿ ಗೆದ್ದಿರುವ ಹಿರಿಯ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಶಾಸಕನಾಗಿದ್ದು, ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೊಡಿ ಎಂದು ದೆಹಲಿಗೆ ಹೋಗಿದ್ದಾಗ ವರಿಷ್ಟರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಬಳಿ ಕೇಳಿದ್ದೇನೆ. ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ನನ್ನ ಹಕ್ಕನ್ನು ಕೇಳಲು ಯಾವುದೇ ಮುಜುಗರ ಇಲ್ಲ. ದೆಹಲಿಗೆ ಹೋಗಲು ಸಹ ಸಿದ್ದನಿದ್ದೇನೆ ಎಂದರು.

ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ನಾನು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ಮುಖ್ಯಮಂತ್ರಿ ಬದಲಾವಣೆ, ಸಚಿವರ ಬದಲಾವಣೆ ಶಾಸಕರ ಕೈಯಲ್ಲಿ ಇಲ್ಲ. ಎಲ್ಲವೂ ರಾಷ್ಟ್ರೀಯ ನಾಯಕರು ನೋಡಿಕೊಳ್ಳುತ್ತಾರೆ. ರಾಷ್ಟ್ರೀಯ ನಾಯಕರು ಯಾವ ತೀರ್ಮಾನ ಮಾಡುತ್ತಾರೋ ಅದಕ್ಕೆ ನಾವು ಬದ್ದರಾಗಿರುತ್ತೇವೆ. ಸರ್ಕಾರ ಐದು ವರ್ಷ ಸುಸೂತ್ರವಾಗಿ ನಡೆಯಬೇಕು ಎನ್ನುವುದು ಎಲ್ಲರ ಆಕಾಂಕ್ಷೆಯಾಗಿದೆ ಎಂದು ಹೇಳಿದರು.

ಸಾಗರ ಜಿಲ್ಲೆ ಮಾಡಲು ನಡೆಸುತ್ತಿರುವ ಹೋರಾಟಕ್ಕೆ ನನ್ನ ಬೆಂಬಲ ಇದೆ. ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವ ಜೊತೆಗೆ ಅವರನ್ನು ಭೇಟಿಯಾಗಿ ಜಿಲ್ಲೆ ಮಾಡುವುದಾದರೆ ಉಪವಿಭಾಗೀಯ ಕೇಂದ್ರವಾಗಿರುವ ಸಾಗರವನ್ನು ಜಿಲ್ಲೆ ಎಂದು ಘೋಷಣೆ ಮಾಡಿ ಎಂದು ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು ಅಂತಹ ಪ್ರಸ್ತಾಪ ಇಲ್ಲ, ಒಂದೊಮ್ಮೆ ಜಿಲ್ಲೆ ಮಾಡುವುದಾದರೆ ಸಾಗರವನ್ನೇ ಮಾಡುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಶಿಕಾರಿಪುರವನ್ನು ಜಿಲ್ಲೆಯಾಗಿ ಘೋಷಣೆ ಮಾಡಲು ಬಿಡುವುದಿಲ್ಲ. ನಗರಸಭೆಗೆ ಆಡಳಿತಾಧಿಕಾರಿ ನೇಮಕ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ. ಅವಧಿ ಮುಂದುವರೆಸಲು ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಈ ಸಂಬಂಧ ನ. 11ಕ್ಕೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News