×
Ad

ಶಿವಮೊಗ್ಗ, ರಾಯಚೂರಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು

Update: 2024-05-22 15:24 IST

PC: PTI

ಶಿವಮೊಗ್ಗ: ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ ವಿಡಿಯೊ ಮಾಡಿದ್ದಾರೆ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ದ ಜೆಡಿಎಸ್ ದೂರು ನೀಡಿದೆ.

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ರಾಯಚೂರು ಹಾಗೂ ಶಿವಮೊಗ್ಗದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಇದನ್ನು ಉಲ್ಲೇಖಿಸಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಮತ್ತು ರಾಯಚೂರು ಹಾಗೂ ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಜೆಡಿಎಸ್ ನಾಯಕ ಎಚ್.ಎಂ ರಮೇಶ್ ಗೌಡ ದೂರು ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 202ರಡಿ ದೂರು ದಾಖಲಿಸಬೇಕು ಎಂದು ಅವರು  ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News