×
Ad

ಹಿರಿಯ ಪತ್ರಕರ್ತ ರವಿಕುಮಾರ್ ಟೆಲೆಕ್ಸ್ ರಿಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Update: 2025-04-23 23:42 IST

ಎನ್. ರವಿಕುಮಾರ್ 

ಶಿವಮೊಗ್ಗ: ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಸಂಪಾದಕ ಎನ್. ರವಿಕುಮಾರ್ (ಟೆಲೆಕ್ಸ್) ಕೇರಳದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಕೊಡಮಾಡುವ 'ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಸಂಘವು ತಿಳಿಸಿದೆ. 

ಪತ್ರಿಕೋದ್ಯಮದಲ್ಲಿ ಎನ್ ರವಿಕುಮಾರ್ ಅವರ ವೃತ್ತಿಪರತೆ, ಸಾಮಾಜಿಕ ಸೌಹಾರ್ದತೆಯನ್ನು ಗುರುತಿಸಿರುವ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, 2025ನೇ ಸಾಲಿನ 'ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಪರಿಷತ್ತಿನ ಸಭಾಪತಿ ಬಸವರಾಜಹೊರಟ್ಟಿ, ಕೃಷಿ ಸಚಿವ ಚೆಲುವರಾಯಸ್ವಾಮಿ, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಭಾಗವಹಿಸಲಿದ್ದಾರೆ.

ಮೇ 3ರಂದು ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಎಲೈನ್ಸ್ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News