×
Ad

ರಾಜ್ಯದ‌ 12 ಕಡೆಗಳಲ್ಲಿ ಲೋಕಾಯುಕ್ತ ದಾಳಿ; ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಪರಿಶೀಲನೆ

Update: 2025-10-14 10:32 IST

ಶಿವಮೊಗ್ಗ: ರಾಜ್ಯದ‌ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ ಮನೆ ಮೇಲೆ ದಾಳಿಯಾಗಿದೆ.

ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್‌ ನಾಯ್ಕ್‌ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಿವಮೊಗ್ಗದ ಸವಳಂಗ ರಸ್ತೆಯ ಶಿವಬಸವ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿರುವ ಅವರ ಮನೆ ಮೇಲೆ ದಾಳಿಯಾಗಿದೆ.

ದಾವಣಗೆರೆಯಿಂದ ಎರಡು ಜೀಪುಗಳಲ್ಲಿ ಆಗಮಿಸಿರುವ ಲೋಕಾಯುಕ್ತ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News