×
Ad

ಶಿವಮೊಗ್ಗ: ಪ್ರೇಯಸಿಗೆ ಚಾಕುವಿನಿಂದ ಇರಿತ

Update: 2024-01-17 11:48 IST

ಶಿವಮೊಗ್ಗ: ಪರಸ್ಪರ ಪ್ರೀತಿಸುತ್ತಿದ್ದ ಯುವಕ-ಯುವತಿ ನಡುವೆ ಮಾತಿಗೆ ಮಾತು ಬೆಳೆದು, ಯುವತಿಗೆ ಚಾಕುವಿನಿಂದ ಇರಿದ ಘಟನೆ  ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತ ಬಳಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಆಡೋನಹ್ಳಳಿ ಗ್ರಾಮದ ಯುವಕ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ  ಪ್ರೀತಿಯಲ್ಲಿ ಅಸಮಾಧಾನ, ಭಿನ್ನಮತ ಕಾಣಿಸಿಕೊಂಡಿದೆ. ಒಂದೇ ಸಮುದಾಯದವರಾದರೂ ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಅಲ್ಲದೆ ಪ್ರೀತಿಯಲ್ಲಿನ ಅಸಮಾಧಾನ ಹಿನ್ನೆಲೆಯಲ್ಲಿ ಬುಧವಾರ ಇಬ್ಬರ ನಡುವೆ ಜಗಳವಾಗಿದೆ. 

ಈ ವೇಳೆ ಸಿಟ್ಟಿನಲ್ಲಿ ಯುವಕ ಯುವತಿಗೆ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ಯುವತಿಯು ಗಂಭೀರವಾಗಿ ಗಾಯಗೊಂಡಿದ್ದಾಳೆ. ಇನ್ನೂ ಘಟನೆಯನ್ನು ನೋಡಿದ ಸ್ಥಳೀಯುರು ಯುವಕನನ್ನ ಹಿಡಿದು ಆತನಿಗೆ ಥಳಿಸಿದ್ದಾರೆ. ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕನ್ನು ಕೂಡ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧ ಕೋಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News