×
Ad

ಶಿವಮೊಗ್ಗ | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ

Update: 2024-02-10 23:10 IST

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿರುವ ರಾಷ್ಟ್ರ ಕವಿ ಕುವೆಂಪು ಅವರು ಓದಿದ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು.

ತೀರ್ಥಹಳ್ಳಿ ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೂ ಮುನ್ನ ಶಾಲೆಗೆ ಭೇಟಿ ನೀಡಿದರು.

ಶಾಲೆಗೆ ಭೇಟಿ ನೀಡುತ್ತಿದ್ದಂತೆ ಶಾಲಾ ಮಕ್ಕಳು ಸಚಿವ ಮಧುಬಂಗಾರಪ್ಪರನ್ನು ಗುಲಾಬಿ ಹೂವು ನೀಡುವುದರ ಮೂಲಕ ಸ್ವಾಗತಿಸಿದರು. ಶಾಲಾ ಎಸ್.ಡಿ.ಎಂ.ಸಿ ಸದಸ್ಯರೊಂದಿಗೆ ಶಾಲೆಗೆ ಆಗಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು. ಶಾಲೆಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಮುಡುಬ ರಾಘವೇಂದ್ರ ಸೇರಿದಂತೆ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.

 

 

 

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News