×
Ad

ಶಿವಮೊಗ್ಗ | ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ

Update: 2024-05-28 13:40 IST

ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ವಿನೋಬ ನಗರದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಚಂದ್ರಶೇಖರನ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬೆಂಗಳೂರಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಚೇರಿಯಲ್ಲಿ  ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಆತ್ಮಹತ್ಯೆಗೂ ಮುನ್ನಾ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಬಹುಕೋಟಿ ಭ್ರಷ್ಟಾಚಾರ ರಹಸ್ಯವನ್ನೂ ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಮೂವರು ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದೂ ತಿಳಿದು ಬಂದಿದೆ.

ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News