×
Ad

ಶಿವಮೊಗ್ಗ | ಸಹ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ವಿದ್ಯಾರ್ಥಿನಿಯಿಂದ ದೂರು, ಪ್ರಕರಣ ದಾಖಲು

Update: 2025-06-25 22:41 IST

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿ ದೂರು ದಾಖಲಿಸಿರುವ ಘಟನೆ ತಡವಾಗಿವ ವರದಿಯಾಗಿದೆ.

ಜೂ.20ರಂದು ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ದೂರು ದಾಖಲಿಸಿದ್ದು, ಈ ಸಂಬಂಧ ಅಶ್ವಿನ್ ಹೆಬ್ಬಾರ್ ಎಂಬಾತನ ವಿರುದ್ಧ ಸೆಕ್ಷನ್ 75 (2) ಅಡಿ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿಯು ಪೊಲೀಸ್ ದೂರು ದಾಖಲಿಸುವ ಮೊದಲು ಕಾಲೇಜಿನ ಆಡಳಿತ ಮಂಡಳಿ ಮತ್ತು ಸಂಸ್ಥೆಯ ಆಂತರಿಕ ದೂರು ಸಮಿತಿಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.

ಕಪ್ಪು ಪಟ್ಟಿ ಧರಿಸಿ ವಿದ್ಯಾರ್ಥಿಗಳಿಂದ ಧರಣಿ :

ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಸಿಮ್ಸ್ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನೂರಾರು ವೈದ್ಯಕೀಯ ವಿದ್ಯಾರ್ಥಿಗಳು ಕಪ್ಪು ಪಟ್ಟಿ ಧರಿಸಿ ಧರಣಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News