×
Ad

ಶಿವಮೊಗ್ಗ | ಲೈಗಿಂಕ ಕಿರುಕುಳ ಆರೋಪ : ತಲೆಮರೆಸಿಕೊಂಡಿದ್ದ ವೈದ್ಯ ಪೊಲೀಸ್‌ ವಶಕ್ಕೆ

Update: 2025-06-26 23:32 IST

ಆರೋಪಿ ಡಾ.ಅಶ್ವಿನ್ ಹೆಬ್ಬಾರ್

ಶಿವಮೊಗ್ಗ : ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣ ಸಂಬಂಧ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕನಾಗಿರುವ ಡಾ.ಅಶ್ವಿನ್ ಹೆಬ್ಬಾರ್ ಎಂಬಾತನನ್ನು ಕರಾವಳಿ ಪ್ರದೇಶದ ದೇವಸ್ಥಾನವೊಂದರ ಸಮೀಪ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ವೈದ್ಯೆ ವಿದ್ಯಾರ್ಥಿನಿ ಡಾ.ಅಶ್ವಿನ್ ಹೆಬ್ಬಾರ್ ಎಂಬಾತನ ವಿರುದ್ದ ಶಿವಮೊಗ್ಗ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾದ ನಂತರ ವೈದ್ಯ ತಲೆಮರೆಸಿಕೊಂಡಿದ್ದ. ಡಾ.ಅಶ್ವಿನ್ ಹೆಬ್ಬಾರ್ ಬಂಧಿಸಬೇಕು ಮತ್ತು ಅಮಾನತುಗೊಳಿಸಬೇಕು ಎಂದು ಲಾಯರ್‍ಸ್ ಗೀಲ್ಡ್ ಸರಕಾರಕ್ಕೆ ಒತ್ತಾಯಿಸಿತ್ತು.ಅಲ್ಲದೆ, ವೈದ್ಯ ವಿದ್ಯಾರ್ಥಿಗಳು ಕೂಡ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಯನ್ನು ಕೂಡ ನಡೆಸಿದ್ದರು.

ಪ್ರಕರಣ ಸಂಬಂಧ ಮಹಿಳಾ ಠಾಣೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಆರೋಪಿ ಡಾ.ಅಶ್ವಿನ್ ಹೆಬ್ಬಾರ್ ರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಶಿವಮೊಗ್ಗಕ್ಕೆ ಕರೆ ತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News