×
Ad

ಎಸೆಸೆಲ್ಸಿ 2, 3ನೇ ಪರೀಕ್ಷೆಗೆ ಶುಲ್ಕ ವಿಧಿಸಿಲ್ಲ: ಮಧು ಬಂಗಾರಪ್ಪ

Update: 2025-05-05 22:41 IST

ಶಿವಮೊಗ್ಗ : ಗ್ರಾಮೀಣ, ಹಿಂದುಳಿದ, ರೈತರು ಮತ್ತು ಬಡ ಮಕ್ಕಳಿಗೆ ಅನುಕೂಲವಾಗಲೆಂದು ಎಸೆಸೆಲ್ಸಿ-2, 3ನೇ ಪರೀಕ್ಷೆ ಕಟ್ಟಲು ಯಾವುದೇ ಶುಲ್ಕವನ್ನು ವಿಧಿಸಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತಮ ಫಲಿತಾಂಶ ಬರಲು ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಯನ್ನು ಈ ಬಾರಿ ತರಲಾಗಿತ್ತು. 2024-25ರ ಪರೀಕ್ಷೆ 1ರ ಫಲಿತಾಂಶವು ಕಳೆದ ಸಾಲಿಗಿಂತ ಶೇ.8.5ರಷ್ಟು ಅಧಿಕವಾಗಿದೆ. ಈ ವರ್ಷ ಶೇ.75ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆ(ಶೇ.60) ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ. ಕಳೆದ ವರ್ಷ ಶೇ.54 ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದಿದ್ದರು. ಈ ಬಾರಿ ಶೇ.75 ರಷ್ಟು ಆರ್‌ಟಿಇ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು.

ಎಸೆಸೆಲ್ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ಕಟ್ಟಲು ಯಾವುದೇ ಶುಲ್ಕವನ್ನು ವಿಧಿಸಿಲ್ಲ. ಜೊತೆಗೆ ಆನ್‌ಲೈನ್‌ನಲ್ಲೇ ತಕ್ಷಣ ಪರೀಕ್ಷೆ ತೆಗೆದುಕೊಳ್ಳುವ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಇದು ಅತ್ಯಂತ ಯಶಸ್ಸು ಕಂಡಿದೆ ಎಂದು ಹೇಳಿದರು.

17 ಸಾವಿರ ಶಿಕ್ಷಕರ ನೇಮಕಾತಿ :

ಸರಕಾರಿ ಶಾಲೆಗಳಿಗೆ ಸುಮಾರು 11 ಸಾವಿರ ಹಾಗೂ ಅನುದಾನಿತ ಶಾಲೆಗಳಿಗೆ 6,500 ಸೇರಿದಂತೆ ಸುಮಾರು 17 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.

ಮೇ 26ರಿಂದ ಜೂ.2ರವರೆಗೆ ಎಸೆಸೆಲ್ಸಿ ಪರೀಕ್ಷೆ-2 ಹಾಗೂ ಜೂ.23ರಿಂದ ಜೂ.30ರವರೆಗೆ ಎಸೆಸೆಲ್ಸಿ ಪರೀಕ್ಷೆ-3 ನಡೆಯಲಿದೆ. 64,600 ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ.

ಮಧು ಬಂಗಾರಪ್ಪ, ಸಚಿವ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News