×
Ad

ಶಿವಮೊಗ್ಗ: ಕಾರು ಪಲ್ಟಿಯಾಗಿ ಯುವಕ ಸಾವು

Update: 2024-10-13 20:32 IST

ಶಿವಮೊಗ್ಗ: ಕಾರು ಪಲ್ಟಿಯಾಗಿ ಯುವಕನೋರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಕುಂಸಿ ಗ್ರಾಮದ ಕೆರೆ ಕೋಡಿ ಬಳಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತಪಟ್ಟವರು.

ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಕುಂಸಿ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಮಡಿಕೇರಿ ಮೂಲದ ನಂದನ್(22), ಕೋಲಾರ ಮೂಲದ ಕೋದಂಡ(18), ಮಂಡ್ಯ ಮೂಲದ ಯೋಗೇಶ್ (24) ಹಾಗೂ ಹಾಸನ ಮೂಲದ ಭರತ್(20) ಗಾಯಗೊಂಡ ಯುವಕರು.

ಬೆಂಗಳೂರಿನ ಯಲಹಂಕದಲ್ಲಿರುವ ಅಮೃತಹಳ್ಳಿ ವಿಬಿಎಸ್‌ ಅಯ್ಯಂಗಾರ್ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ 5 ಜನ ಯುವಕರು ಇಂದು ಬೇಕರಿಗೆ ರಜೆ ಇದ್ದ ಕಾರಣ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ತೆರಳಲು ನಿರ್ಧರಿಸಿದ್ದರು. ಅದರಂತೆ ಶನಿವಾರ ರಾತ್ರಿ ವೇಳೆಗೆ ಬೆಂಗಳೂರಿನಿಂದ ಹೊರಟ್ಟಿದ್ದರು.ಭಾನುವಾರ ಬೆಳಿಗ್ಗೆ ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಕುಂಸಿಯ ಕೆರೆ ಕೋಡಿ ಬಳಿ ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ಗದ್ದೆಗೆ ಬಿದ್ದಿದೆ. ಕಾರು ಚಾಲನೆ ಮಾಡುತ್ತಿದ್ದ ಚಂದನ್ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದ ಇತರ ಯುವಕರು ಸಹ ಗಾಯಗೊಂಡಿದ್ದು, ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News