ಶಿವಮೊಗ್ಗ: ಟ್ರಾಫಿಕ್ ಚಲನ್ ಹೆಸರಿನಲ್ಲಿ ಪೊಲೀಸ್ ಸಿಬ್ಬಂದಿಗೆ ವಂಚನೆ
Update: 2025-10-13 23:16 IST
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಟ್ರಾಫಿಕ್ ಚಲನ್ ಹೆಸರಿನಲ್ಲಿ ಬಂದ ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಪೊಲೀಸ್ ಸಿಬ್ಬಂದಿಯೊಬ್ಬರು ಹಣ ಕಳೆದುಕೊಂಡ ಘಟನೆ ವರದಿಯಾಗಿದೆ.
ಶಿವಮೊಗ್ಗ ಜಿಲ್ಲೆಯ ಪೊಲೀಸ್ ಸಿಬ್ಬಂದಿಯೊಬ್ಬರ ವಾಟ್ಸ್ ಆ್ಯಪ್‌ಗೆ ಟ್ರಾಫಿಕ್ ಚಲನ್ ಎಂದು ಎಪಿಕೆ ಫೈಲ್ ಬಂದಿತ್ತು. ಅದನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ವಾಹನದ ವಿರುದ್ಧದ ದಂಡವಿರಬಹುದು ಎಂದು ಪರಿಶೀಲಿಸಿದ್ದರು. ಆದರೆ ಯಾವುದೇ ಮಾಹಿತಿ ತೋರಿಸದ ಹಿನ್ನೆಲೆ ಸುಮ್ಮನಾಗಿದ್ದರು.
ಸ್ವಲ್ಪ ದಿನಗಳ ಬಳಿಕ ಪೊಲೀಸ್ ಸಿಬ್ಬಂದಿಯ ಎರಡು ಬ್ಯಾಂಕ್ ಖಾತೆಗಳಿಂದ ಒಟ್ಟು 1.47 ಲಕ್ಷ ರೂ. ಕಡಿತವಾಗಿರುವುದು ಗಮನಕ್ಕೆ ಬಂದಿತ್ತು. ಎಪಿಕೆ ಫೈಲ್ ಮೂಲಕ ತಮ್ಮ ಮಾಹಿತಿ ಕದ್ದು ಬ್ಯಾಂಕ್ ಖಾತೆಯಿಂದ ಹಣ ದೋಚಿದ್ದಾರೆ ಎಂದು ಪೊಲೀಸ್ ಸಿಬ್ಬಂದಿ ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.